Advertisement
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಈ ಸಭೆ ನಡೆದಿದ್ದು, ವಿಪಕ್ಷ ನಾಯಕರಾದ ಆರ್.ಅಶೋಕ್, ಕೋಟ ಶ್ರೀನಿವಾಸ್ ಪೂಜಾರಿ, ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ.ಸದಾನಂದ ಗೌಡ, ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಯಿ, ಮಾಜಿ ಡಿಸಿಎಂ ಗೋವಿಂದ ಕಾರಜೋಳ, ಮಾಜಿ ಸಚಿವ ಸಿ.ಟಿ.ರವಿ, ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮೊದಲಾದವರು ಭಾಗವಹಿಸಿದ್ದರು.
Related Articles
Advertisement
ಪ್ರಮುಖರ ಮಧ್ಯೆ ಕುಳಿತ ಯದುವೀರ್ಸಭೆಗೆ ಆಗಮಿಸಿದ್ದ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿ, ರಾಜವಂಶಸ್ಥ ಯದುವೀರ್ ಅಭ್ಯರ್ಥಿಗಳು ಹಾಗೂ ಪ್ರಮುಖರ ಮಧ್ಯೆಯೇ ಕುಳಿತಿದ್ದರು. ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ಶೋಭಾ, ಬಸವರಾಜ್ ಬೊಮ್ಮಾಯಿ ಸಹಿತ ಕೆಲವು ಪ್ರಮುಖ ಅಭ್ಯರ್ಥಿಗಳು ಸಭೆಗೆ ಗೈರಾಗಿದ್ದರು. ಸರಕಾರದ ವಿರುದ್ಧ ಬಿಜೆಪಿ 152 ಚುನಾವಣ ದೂರು
ಬೆಂಗಳೂರು: ಲೋಕಸಭಾ ಚುನಾವಣೆ ಘೋಷಣೆಯಾದ ದಿನದಿಂದ ರಾಜ್ಯ ಕಾಂಗ್ರೆಸ್ ಸರಕಾರ ಆಡಳಿತ ಯಂತ್ರವನ್ನು ವ್ಯಾಪಕವಾಗಿ ದುರುಪಯೋಗಪಡಿಸಿಕೊಂಡಿದ್ದು, ಸರಕಾರದ ವಿರುದ್ಧ 152 ದೂರುಗಳನ್ನು ಚುನಾವಣ ಆಯೋಗಕ್ಕೆ ನೀಡಲಾಗಿದೆ ಎಂದು ಬಿಜೆಪಿ ಚುನಾವಣೆ ನಿರ್ವಹಣ ಸಮಿತಿ ರಾಜ್ಯ ಸಂಚಾಲಕ ವಿ.ಸುನೀಲ್ ಕುಮಾರ್ ತಿಳಿಸಿದರು. ಲೋಕಸಭಾ ಚುನಾವಣೆ ಅವಲೋಕನ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರಕಾರ ಎಲ್ಲ ಜಿÇÉೆ- ತಾಲೂಕುಗಳಲ್ಲಿ ನಮ್ಮ ಕಾರ್ಯಕರ್ತರನ್ನು ಬೆದರಿಸುವ ತಂತ್ರ ನಡೆಸಿದೆ. ಕಾರ್ಯಕರ್ತರ ವಿರುದ್ಧ ಅಪಾರ ಮೊಕದ್ದಮೆ ದಾಖಲಿಸಲಾಗಿದೆ. ಇವುಗಳ ವಿರುದ್ಧ ಸ್ಥಳೀಯವಾಗಿ ದೂರು ಕೊಡಲಾಗಿದೆ. ರಾಜಕೀಯವಾಗಿಯೂ ನಾವು ಈ ಆಕ್ರಮಣವನ್ನು ಎದುರಿಸುತ್ತೇವೆ ಎಂದು ಹೇಳಿದರು. 60 ಸಾವಿರಕ್ಕೂ ಹೆಚ್ಚು ಬೂತ್ ಸಭೆ
ಪ್ರಧಾನಿ ಮೋದಿ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸಹಿತ 14 ಜನ ರಾಷ್ಟ್ರೀಯ ಪ್ರಮುಖರು 79 ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಿದ್ದರು. 39 ಕಡೆಗಳಲ್ಲಿ ರೋಡ್ ಶೋ ನಡೆದಿವೆ. ರಾಜ್ಯ ನಾಯಕರಾದ ಯಡಿಯೂರಪ್ಪ, ವಿಜಯೇಂದ್ರ ಮತ್ತು ಆರ್.ಅಶೋಕ್ ಸಹಿತ ಸುಮಾರು 30 ಪ್ರಮುಖರು 557 ಸಭೆಗಳಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ್ದಾರೆ. 139 ಕಡೆಗಳಲ್ಲಿ ರಾಜ್ಯ ನಾಯಕರು ರೋಡ್ ಶೋ ನಡೆಸಿದ್ದಾರೆ ಎಂದು ವಿವರಿಸಿದರು. ಒಟ್ಟು 650ಕ್ಕೂ ಹೆಚ್ಚು ಸಾರ್ವಜನಿಕ ಸಭೆ, 180ಕ್ಕೂ ಹೆಚ್ಚು ರೋಡ್ ಶೋಗಳನ್ನು ಮಾಡಲಾಗಿದೆ. ಕಾಂಗ್ರೆಸ್ ಅಪಪ್ರಚಾರ ಬಗ್ಗೆ ಹಾಗೂ ಕಾಂಗ್ರೆಸ್ ಅಪಾಯಕಾರಿ ಎಂದು ತಿಳಿಸಲು ಮನೆಯಂಗಳದಲ್ಲಿ ಸಭೆ ನಡೆಸಿದ್ದೇವೆ. 50-75 ಜನರನ್ನು ಒಳಗೊಂಡ ಸುಮಾರು 60 ಸಾವಿರಕ್ಕೂ ಹೆಚ್ಚು ಸಣ್ಣಸಣ್ಣ ಸಭೆಗಳನ್ನು ಬೂತ್ ಮಟ್ಟದಲ್ಲಿ ನಡೆಸಿರುವುದು ಈ ಚುನಾವಣೆಯ ವಿಶೇಷ ಎಂದು ತಿಳಿಸಿದರು. ಕಾಂಗ್ರೆಸ್ ಸರಕಾರ ಅವರದೇ ಅಂತಃಕಲಹದ ಭಾರದಲ್ಲಿ ಕುಸಿದು ಬೀಳಲಿದ್ದು, ಅವರು ಬಿದ್ದಾಗ ನಮ್ಮ ರಾಜಕಾರಣ ನಡೆಸುತ್ತೇವೆ. ನಾಯಕತ್ವಕ್ಕಾಗಿ 4 ರೀತಿಯ ಪೈಪೋಟಿ ಕಾಂಗ್ರೆಸ್ ಪಕ್ಷದಲ್ಲಿದೆ. ಸಿದ್ದರಾಮಯ್ಯನವರು ವರುಣಾ ಕ್ಷೇತ್ರದಲ್ಲಿ ಮಾಡಿದ ಭಾಷಣ ಇದಕ್ಕೆ ಜ್ವಲಂತ ಉದಾಹರಣೆ.
-ವಿ. ಸುನಿಲ್‌ಕುಮಾರ್, ಬಿಜೆಪಿ ನಾಯಕ