Advertisement

Lok Sabha Elections; ಸೌಜನ್ಯ ಹೋರಾಟ ಸಮಿತಿಯಿಂದ ನೋಟಾ ಅಭಿಯಾನ ಆರಂಭ

10:41 PM Apr 05, 2024 | Team Udayavani |

ಮಂಗಳೂರು: ಸೌಜನ್ಯ ಪ್ರಕರಣ ಸಹಿತ ಹೆಣ್ಮಕ್ಕಳ ಅತ್ಯಾಚಾರ, ಕೊಲೆ ಪ್ರಕರಣಗಳಿಗೆ ಸಂಬಂಧಿಸಿದಂತೆ ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸುವಂತೆ ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟಾ ಅಭಿಯಾನ ಹಮ್ಮಿಕೊಂಡಿದೆ ಎಂದು ಸಮಿತಿ ಮುಖಂಡ ಗರೀಶ್‌ ಮಟ್ಟನ್ನನವರ್‌ ತಿಳಿಸಿದ್ದಾರೆ.

Advertisement

ಶುಕ್ರವಾರ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಸೌಜನ್ಯ ಪ್ರಕರಣ ನಡೆದು 11 ವರ್ಷ ಕಳೆದರೂ ಯಾವುದೇ ರಾಜಕೀಯ ಪಕ್ಷಗಳು ಸೂಕ್ತ ಸ್ಪಂದನೆ ನೀಡಿಲ್ಲ. ಆದ್ದರಿಂದ ಈ ಬಾರಿ ನೋಟಾಕ್ಕೆ ಮತ ಚಲಾಯಿಸಿ ಗಮನ ಸೆಳೆಯಲು ಉದ್ದೇಶಿಸಲಾಗಿದೆ. ನೋಟಾ ಬಗ್ಗೆ ಜನ ಜಾಗೃತಿ ಅಗತ್ಯವಿದೆ ಎಂದು ನ್ಯಾಯಾಲಯವೇ ಹೇಳಿದೆ. ಹೆಣ್ಣು ಮಕ್ಕಳ ರಕ್ಷಣೆ ಬಗ್ಗೆ ಪ್ರಾಧಾನ್ಯತೆ ನೀಡುವ ಈ ಅಭಿಯಾನಕ್ಕೆ ಜನರು ಸಹಕಾರ ನೀಡಬೇಕು. ದ.ಕ. ಹಾಗೂ ಉಡುಪಿಯಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರವಾರು ಅಭಿಯಾನ ಹಮ್ಮಿಕೊಳ್ಳುತ್ತಿದ್ದು, ಸುಳ್ಯದಲ್ಲಿ ಎ.24ರಂದು ನೋಟಾ ಜನಜಾಗೃತಿ ಸಭೆ ಹಮ್ಮಿಕೊಳ್ಳಲಾಗಿದೆ ಎಂದರು.

ಸಮಿತಿಯ ಪ್ರಮುಖರಾದ ಪ್ರಸನ್ನ ರವಿ, ತಮ್ಮಣ್ಣ ಶೆಟ್ಟಿ, ಜಯನ್‌ ಉಪಸ್ಥಿತರಿದ್ದರು.

 

Advertisement

Udayavani is now on Telegram. Click here to join our channel and stay updated with the latest news.

Next