Advertisement
ಈಗಾಗಲೇ ದೇಶದಲ್ಲಿ ಚುನಾವಣೆ ಕಾವೇರಿದೆ. ಎಲ್ಲೆಲ್ಲೂ ಅಬ್ಬರದ ಪ್ರಚಾರ ಜೋರಾಗಿದೆ. ಅದರಲ್ಲೂ ಮೊದಲನೇ ಹಂತದ ಚುನಾವಣೆ ಇರುವಂಥ ಕೆಲವೊಂದು ಹೈವೋಲ್ಟೇಜ್ ಕ್ಷೇತ್ರಗಳಲ್ಲಂತೂ ಬಿಸಿಲು ಲೆಕ್ಕಿಸದೆ ಪ್ರಚಾರ ನಡೆಸಲಾಗುತ್ತಿದೆ. ಅದೇ ರೀತಿ ಬಹುತೇಕ ಎಲ್ಲ ಕ್ಷೇತ್ರ ಗಳಿಗೆ ಅಭ್ಯರ್ಥಿಗಳನ್ನು ಕೂಡ ಅಂತಿಮಗೊಳಿಸಿದ್ದು, ಎರಡನೇ ಹಂತದ ಚುನಾವಣೆಗಳಿರುವ ಕಡೆ ಮಾತ್ರ ಪ್ರಚಾರ ಭರಾಟೆ ಅಷ್ಟಾಗಿ ಕಾಣಿಸುತ್ತಿಲ್ಲ.
Related Articles
ಚುನಾವಣೆ ರ್‍ಯಾಲಿ, ಬಹಿರಂಗ ಸಮಾವೇಶಗಳಿಗಿಂತ ಟೆಂಪಲ್ ರನ್‌ಗೆ ಅಭ್ಯರ್ಥಿಗಳು ಹೆಚ್ಚು ಒತ್ತು ನೀಡುತ್ತಿದ್ದಾರೆ. ಕ್ಷೇತ್ರದಲ್ಲಿರುವ ಪ್ರಮುಖ ಮಠ ಮಾನ್ಯಗಳು, ದೇವಸ್ಥಾನಗಳಿಗೆ ಅಭ್ಯರ್ಥಿಗಳು ಭೇಟಿ ನೀಡಿ ದರ್ಶನ ಪಡೆಯುವ ಮೂಲಕ ಅಲ್ಲಿನ ಭಕ್ತರ ವಿಶ್ವಾಸ ಗಳಿಸುವ ಪ್ರಯತ್ನದಲ್ಲಿದ್ದಾರೆ. ಇನ್ನೂ ವಿವಿಧ ತಾಲೂಕು ಕೇಂದ್ರಗಳಲ್ಲಿ ಸಣ್ಣ ಪ್ರಮಾಣದ ಕಾರ್ಯಕ್ರಮಗಳನ್ನು ನಡೆಸಿ ಕಾರ್ಯಕರ್ತರನ್ನು ಸೇರಿಸಿಕೊಳ್ಳುವ ಮೂಲಕ ಪಕ್ಷ ಸಂಘಟನೆಗೂ ಒತ್ತ ನೀಡಲಾಗುತ್ತಿದೆ.
Advertisement
ಬಿಸಿಲ ಝಳದ ಭೀತಿಈಗಾಗಲೇ ಬಿಸಿಲಿನ ಝಳ ದಿನೇದಿನೆ ಹೆಚ್ಚಾಗುತ್ತಿದ್ದು, 42 ಡಿಗ್ರಿ ಸೆಲ್ಸಿಯಸ್ ಸಮೀಪಿಸಿದೆ. ಅಭ್ಯರ್ಥಿಗಳು ಬಿಸಿಲಲ್ಲಿ ಪ್ರಚಾರ ಕಾರ್ಯಕ್ಕೆ ಮುಂದಾಗಲು ಹಿಂಜರಿಯುವಂತಾಗಿದೆ. ಹೀಗಾಗಿ ಬೆಳಗ್ಗೆ ಬೇಗನೆ ಮನೆ ಬಿಡುತ್ತಿದ್ದು, ಮಧ್ಯಾಹ್ನ ವಿಶ್ರಾಂತಿ ಪಡೆಯುತ್ತಿದ್ದಾರೆ. ಸಂಜೆ ನಂತರ ಮತ್ತೆ ಪ್ರಚಾರಕ್ಕೆ ಮುಂದಾಗುತ್ತಿದ್ದಾರೆ. ಮಧ್ಯಾಹ್ನ ಹೋದರೂ ಹೆಚ್ಚು ಜನ ಸೇರುತ್ತಿಲ್ಲ. - ಸಿದ್ಧಯ್ಯಸ್ವಾಮಿ ಕುಕನೂರು