Advertisement

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

11:59 PM Apr 24, 2024 | Team Udayavani |

ಮಂಡ್ಯ: ಲೋಕಸಭಾ ಚುನಾವಣೆಯ ಮೈತ್ರಿ ಅಭ್ಯರ್ಥಿ ಎಚ್‌.ಡಿ.ಕುಮಾರಸ್ವಾಮಿ ಪರ ಪ್ರಚಾರ ಮಾಡಲು ಕೊನೆಗೂ ಸಂಸದೆ ಸುಮಲತಾ ಅಂಬರೀಷ್‌ ಅವರು ಬರಲೇ ಇಲ್ಲ. ಇದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

Advertisement

ಚುನಾವಣೆ ಸ್ಪರ್ಧೆಯಿಂದ ಹಿಂದೆ ಸರಿದು, ಬಿಜೆಪಿ ಸೇರ್ಪಡೆಗೊಂಡ ಸುಮಲತಾ, ಬೇರೆ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದರು. ಆದರೆ, ಮಂಡ್ಯ ಕ್ಷೇತ್ರದಲ್ಲಿ ಮಾತ್ರ ಮೈತ್ರಿ ಅಭ್ಯರ್ಥಿ ಎಚ್‌.ಡಿ. ಕುಮಾರಸ್ವಾಮಿ ಪರ ಪ್ರಚಾರ ಮಾಡಲಿಲ್ಲ. ಬಹಿರಂಗ ಪ್ರಚಾರದ ಕೊನೆಯ ದಿನವಾದ ಬುಧವಾರ ಎಚ್‌.ಡಿ. ಕುಮಾರಸ್ವಾಮಿ ಅವರು ಮಂಡ್ಯದಲ್ಲಿ ಹಮ್ಮಿಕೊಂಡಿದ್ದ ಬೃಹತ್‌ ರ್ಯಾಲಿಯಲ್ಲಾದರೂ ಸುಮಲತಾ ಪಾಲ್ಗೊಳ್ಳುವ ನಿರೀಕ್ಷೆ ಇತ್ತಾದರೂ ಅವರು ಪಾಲ್ಗೊಳ್ಳಲಿಲ್ಲ. ಇದರಿಂದ ಗೌಡ್ತಿ ಹಾಗೂ ದಳಪತಿಗಳ ನಡುವಿನ ರಾಜಕೀಯ ಜಿದ್ದಾಜಿದ್ದಿ ಮುಂದುವರಿದಿದೆ ಎಂಬ ಚರ್ಚೆಗಳು ಸಾರ್ವಜನಿಕ ವಲಯದಲ್ಲಿ ನಡೆಯುತ್ತಿದೆ.

 

Advertisement

Udayavani is now on Telegram. Click here to join our channel and stay updated with the latest news.

Next