Advertisement

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

03:22 PM May 06, 2024 | Team Udayavani |

ಹಾವೇರಿ: ಹಾವೇರಿ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಮೇ 7ರಂದು ಮತದಾನ ನಡೆಯಲಿದ್ದು, ಸೋಮವಾರ ಮಸ್ಟರಿಂಗ್ ಕೇಂದ್ರಗಳಿಂದ ಆಯಾ ಮತಗಟ್ಟೆಗಳಿಗೆ ವಿದ್ಯುನ್ಮಾನ ಮತಯಂತ್ರಗಳೊಂದಿಗೆ ನಿಯೋಜಿತ ಮತಗಟ್ಟೆ ಅಧಿಕಾರಿಗಳು ತೆರಳಿದರು.

Advertisement

ಜಿಲ್ಲೆಯ ಮಸ್ಟರಿಂಗ್ ಸಿದ್ಧತಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ರಘುನಂದನ ಮೂರ್ತಿ, ಅಪರ ಜಿಲ್ಲಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿ ಪೂಜಾರ ವೀರಮಲ್ಲಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಧಿಕಾರಿಗಳಿಗೆ ಅಗತ್ಯ ಮಾರ್ಗದರ್ಶನ ಮಾಡಿದರು.

ಹಾವೇರಿ ಲೋಕಸಭಾ ಕ್ಷೇತ್ರದ ಐದು ವಿಧಾನಸಭಾ ಕ್ಷೇತ್ರ ಹಾಗೂ ಧಾರವಾಡ ಕ್ಷೇತ್ರ ವ್ಯಾಪ್ತಿಗೆ ಬರುವ ಶಿಗ್ಗಾವಿ ಕ್ಷೇತ್ರ ಒಳಗೊಂಡಂತೆ 224 ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಮತಗಟ್ಟೆ ಅಧ್ಯಕ್ಷಾಧಿಕಾರಿಗಳು, ಸಹಾಯಕ ಅಧ್ಯಕ್ಷಾಧಿಕಾರಿಗಳು, ಮತಗಟ್ಟೆ ಅಧಿಕಾರಿ, ಸೂಕ್ಷ್ಮ ವೀಕ್ಷಕರು ಒಳಗೊಂಡಂತೆ 6958 ಸಿಬ್ಬಂದಿಗಳನ್ನು ನಿಯೋಜಿಸಿದ್ದು, ಈ ಪೈಕಿ 3097 ಸಿಬ್ಬಂದಿಗಳು ಅದೇ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹಾಗೂ 3861 ಸಿಬ್ಬಂದಿಗಳನ್ನು ತಾವು ಕರ್ತವ್ಯ ನಿರ್ವಹಿಸುತ್ತಿರುವ ವಿಧಾನಸಭಾ ಕ್ಷೇತ್ರದಿಂದ ಬೇರೆ ವಿಧಾನಸಭಾ ಕ್ಷೇತ್ರಕ್ಕೆ ನಿಯೋಜಿಸಲಾಗಿದೆ. ಎಲ್ಲರೂ ನಿಗದಿತ ಮಸ್ಟರಿಂಗ್ ಕೇಂದ್ರದಿಂದ ವಿದ್ಯುನ್ಮಾನ ಮತಯಂತ್ರಗಳು ಹಾಗೂ ಮತದಾನ ಪ್ರಕ್ರಿಯೆ ಅಗತ್ಯ ಚುನಾವಣಾ ಸಾಮಗ್ರಿಗಳೊಂದಿಗೆ ರಕ್ಷಣಾ ವ್ಯವಸ್ಥೆಯೊಂದಿಗೆ ಆಯಾ ಮತಗಟ್ಟೆಗೆ ತೆರಳಿದ್ದು, ಮೇ 7ರ ಮತದಾನ ಪ್ರಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳಲಿದ್ದಾರೆ.

ಮಸ್ಟರಿಂಗ್ ಮತ್ತು ಡಿ ಮಸ್ಟರಿಂಗ್ ಕೇಂದ್ರಗಳು..
ಹಾನಗಲ್ಲ ಪಟ್ಟಣದ ಶ್ರೀ ಕುಮಾರೇಶ್ವರ ಪ್ರಥಮದರ್ಜೆ ಕಾಲೇಜು ಹಾಗೂ ಎನ್.ಸಿ.ಜೆ.ಸಿ. ಪಿ.ಯು ಕಾಲೇಜು, ಶಿಗ್ಗಾವಿ ಪಟ್ಟಣದ ಜೆ.ಎಂ.ಜೆ. ಶಾಲೆ, ಹಾವೇರಿ ನಗರದ ಹುಕ್ಕೇರಿಮಠ ಶ್ರೀ ಶಿವಲಿಂಗೇಶ್ವರ ಮಹಿಳಾ ಪ್ರಥಮ ದರ್ಜೆ ಕಾಲೇಜು, ಬ್ಯಾಡಗಿ ಪಟ್ಟಣದ ಎಸ್ .ಜೆ.ವಿ ಹೈಸ್ಕೂಲ್, ಹಿರೇಕೆರೂರು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ರಾಣೆಬೆನ್ನೂರು ನಗರದ ರೋಟರಿ ಆಂಗ್ಲ ಮಾಧ್ಯಮ ಶಾಲೆ ಹಾಗೂ ರೋಟರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮೇ 7ರಂದು ಡಿ ಮಸ್ಟರಿಂಗ್ ಕಾರ್ಯ ನಡೆಯಲಿದೆ.

ವಾಹನ ಚಾಲಕರಿಗೆ ಮತದಾನಕ್ಕೆ ಅವಕಾಶ..
ಚುನಾವಣಾ ಕಾಯ೯ಕ್ಕೆ ಬಳಿಸಿಕೊಳ್ಳಲಾದ ಖಾಸಗಿ ವಾಹನಗಳ ಚಾಲಕರಿಗೆ ಮೇ 7 ರಂದು ಮತದಾನ ಮಾಡಲು ಅವಕಾಶ ಮಾಡಿಕೊಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾಚುನಾವಣಾಧಿಕಾರಿಗಳಾದ ರಘುನಂದನ್ ಮೂತಿ೯ ಅವರು ತಿಳಿಸಿದ್ದಾರೆ.

Advertisement

ಇದನ್ನೂ ಓದಿ: Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

Advertisement

Udayavani is now on Telegram. Click here to join our channel and stay updated with the latest news.

Next