ಮಂಡ್ಯ: ಲೋಕಸಭೆ ಸಾರ್ವತ್ರಿಕ ಚುನಾವಣೆ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದೆ ಸುಮಲತಾ ಅಂಬರೀಷ್ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಲು ಮುಂದಾಗಿದ್ದು, ಬಿಜೆಪಿಯಿಂದ ಟಿಕೆಟ್ ನೀಡುವಂತೆ ಪಟ್ಟು ಹಿಡಿದಿದ್ದಾರೆ. ಶತಾಯಗತಾಯ ಮಂಡ್ಯ ಲೋಕಸಭೆ ಕ್ಷೇತ್ರ ದಿಂದಲೇ ಬಿಜೆಪಿಯಿಂದ ಮೈತ್ರಿ ಅಭ್ಯರ್ಥಿಯಾಗಬೇಕು ಎಂಬ ನಿಟ್ಟಿನಲ್ಲಿ ಕಸರತ್ತು ಆರಂಭಿಸಿದ್ದಾರೆ.
ಅದಕ್ಕಾಗಿ ಬಿಜೆಪಿ ಹೈಕಮಾಂಡ್ ಮಟ್ಟದಲ್ಲಿಯೇ ಲಾಬಿ ನಡೆಸಿರುವ ಸುಮಲತಾ ಟಿಕೆಟ್ ನೀಡುವಂತೆ ಮನವಿ ಮಾಡುತ್ತಿದ್ದಾರೆ. ರಾಜ್ಯಸಭೆ ಸದಸ್ಯ ಸ್ಥಾನ ಆಫರ್: ಜೆಡಿಎಸ್ -ಬಿಜೆ ಪಿ ಮೈತ್ರಿಯಾಗಿರುವುದರಿಂದ ಮಂಡ್ಯ ಕ್ಷೇತ್ರ ದ ವಿಚಾರದಲ್ಲಿ ದಳಪತಿಗಳ ಹಿಡಿತಕ್ಕೆ ನೀಡಲಾಗಿದೆ.
ಇದರಿಂದ ಮೈತ್ರಿ ಟಿಕೆಟ್ ಬಹುತೇಕ ಜೆಡಿಎಸ್‌ಗೆ ಸಿಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಸುಮಲತಾ ಅಂಬರೀಷ್‌ಗೆ ಬಿಜೆಪಿ ನಾಯಕರು ರಾಜ್ಯಸಭೆ ಆಫರ್ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಬಿ ಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋ ಷ್ ಅವರ ನ್ನು ಭೇಟಿ ಮಾಡಿ ಟಿಕೆಟ್‌ಗೆ ಮನವಿ ಮಾಡಿದ್ದಾರೆ. ಆದರೆ, ಎಲ್ಲರೂ ರಾಜ್ಯಸಭೆ ಸದಸ್ಯರನ್ನಾಗಿ ಮಾಡುವ ಮೂಲಕ ಪಕ್ಷದಲ್ಲಿಯೂ ಸ್ಥಾನಮಾನ ನೀಡುವ ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಆಫರ್ ತಿರಸ್ಕರಿಸಿರುವ ಸುಮಲತಾ?: ಬಿಜೆಪಿ ನಾಯಕರ ರಾಜ್ಯಸಭೆ ಸ್ಥಾನದ ಆಫರ್ ಅನ್ನು ಸುಮಲತಾ ತಿರಸ್ಕರಿಸಿದ್ದು, ಮಂಡ್ಯ ಲೋಕಸಭಾ ಕ್ಷೇತ್ರದಿಂದಲೇ ಸ್ಪರ್ಧಿಸಬೇಕು. ಅದಕ್ಕಾಗಿ ಬಿಜೆಪಿ ಯಿಂದ ಟಿಕೆಟ್ ನೀಡಬೇಕು ಎಂದು ಪಟ್ಟು ಹಿಡಿದಿದ್ದಾರೆ ಎಂದು ಸುಮಲತಾ ಅವರ ಆಪ್ತ ಮೂಲಗಳು ತಿಳಿಸಿವೆ. ಇದಕ್ಕೆ ಬಿಜೆಪಿ ನಾಯಕರು ಸಹ ನೀಡಿರುವ ಭರವಸೆ ಒಪ್ಪಿಕೊಳ್ಳಬೇಕು. ಈಗಾಗಲೇ ಮೈತ್ರಿಯಾಗಿರುವುದರಿಂದ ಜೆಡಿಎಸ್ ತೀರ್ಮಾನದ ಮೇಲೂ ಟಿಕೆಟ್ ವಿಚಾರ ನಿಂತಿರುವುದರಿಂದ ಬಿಜೆಪಿ ಏಕಾಂಗಿಯಾಗಿ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ. ಆದ್ದರಿಂದ ರಾಜ್ಯಸಭೆ ಸ್ಥಾನದ ಆಫರ್ ಒಪ್ಪಿಕೊಳ್ಳುವಂತೆ ಮನವೊಲಿಸುವ ಪ್ರಯತ್ನ ಮುಂದುವರಿದಿದ್ದು, ಇದಕ್ಕೆ ಸುಮಲತಾ ಒಪ್ಪಿಕೊಳ್ತಾರಾ? ಕಾದು ನೋಡಬೇಕಿದೆ.
ಸುಮಲತಾ ಹಠದಿಂದ ಮೈತ್ರಿ ಬಿರುಕು?: ಸುಮಲತಾ ಅಂಬರೀಷ್ ಟಿಕೆಟ್‌ಗಾಗಿ ಹಠಕ್ಕೆ ಬಿದ್ದವರಂತೆ ಬಿಜೆಪಿಯಲ್ಲಿ ಲಾಬಿ ನಡೆಸುತ್ತಿದ್ದಾರೆ. ಇದರಿಂದ ಮಂಡ್ಯ ಕ್ಷೇತ್ರದಲ್ಲಿ ಮೈತ್ರಿಯಲ್ಲಿ ಬಿರುಕು ಮೂಡುವಂತೆ ಮಾಡಿದೆ. ಮೊದಲಿನಿಂದಲೂ ಸುಮಲತಾ ಹಾಗೂ ದಳಪತಿ ಗಳು ಹಾವು ಮುಂಗುಸಿಯಂತೆ ರಾಜಕೀಯದಲ್ಲಿ ತೊಡಗಿದ್ದಾರೆ. ಇದೀಗ ಗೃಹ ಸಚಿವ ಅಮಿತ್ ಶಾ ಮೈಸೂರಿಗೆ ಭೇಟಿ ನೀಡಿದ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡರಿಗೆ ಮೈತ್ರಿ ಧರ್ಮ ಪಾಲಿಸುವಂತೆ ಸೂಚಿಸಿದ್ದಾರೆ. ಇದರಿಂದ ನಾನು ಮೂಲೆ ಗುಂಪಾ ಗುತ್ತೇನೆಂಬ ಹಿನ್ನೆಲೆಯಲ್ಲಿ ಟಿಕೆಟ್‌ಗಾಗಿ ಪಟ್ಟು ಹಿಡಿದು ಕುಳಿತಿದ್ದಾರೆನ್ನಲಾಗಿದೆ.
ಕಾಂಗ್ರೆಸ್ ಟಿಕೆಟ್‌ಗೂ ಕಸರತ್ತು ಒಂದೆಡೆ ಸುಮಲತಾ ಬಿಜೆಪಿಯಿಂದ ಟಿಕೆಟ್ ತರಲು ಮುಂದಾಗಿದ್ದರೆ, ಮತ್ತೂಂದೆಡೆ ಮಾಜಿ ಸಚಿವ ಕೆ.ಸಿ.ನಾರಾಯಣಗೌಡ ಮೂಲಕ ಕಾಂಗ್ರೆಸ್‌ನಿಂದ ಟಿಕೆಟ್ ಪಡೆಯಲು ಕಸರತ್ತು ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಮೈತ್ರಿಕೂಟದಿಂದ ಟಿಕೆಟ್ ಕೈ ತಪ್ಪಿದರೆ, ಕಾಂಗ್ರೆಸ್‌ನಿಂದ ಟಿಕೆಟ್ ಪಡೆದು ಮಂಡ್ಯ ಕ್ಷೇತ್ರದಿಂದಲೇ ಸ್ಪರ್ಧಿಸುವ ಇಂಗಿತವಿದ್ದು, ಅದಕ್ಕಾಗಿ ಕೆ.ಸಿ.ನಾರಾಯಣಗೌಡ ಅವರ ಮೂಲಕ ಕಾಂಗ್ರೆಸ್‌ನಲ್ಲೂ ಟಿಕೆಟ್‌ಗಾಗಿ ಲಾಬಿ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಈ ನಿಟ್ಟಿನಲ್ಲಿ ಮಾಜಿ ಸಚಿವ ನಾರಾಯಣಗೌಡ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಮಂಡ್ಯದಿಂದ ಟಿಕೆಟ್ ನೀಡುವುದಾದರೆ ನಾನು ಹಾಗೂ ಸಂಸದೆ ಸುಮಲತಾ ಅವರು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವುದಾಗಿ ತಿಳಿಸಿದ್ದು, ತಮ್ಮ ಆಪ್ತ ವಲಯಕ್ಕೂ ಕಾಂಗ್ರೆಸ್ ಪಕ್ಷಕ್ಕೆ ಬರುವಂತೆ ಸೂಚಿಸಿದ್ದಾರೆ ಎಂದು ಸಂಸದೆ ಸುಮಲತಾ ಅಂಬರೀಶ್ ಆಪ್ತರೊಬ್ಬರು ತಿಳಿಸಿದರು.
– ಎಚ್.ಶಿವರಾಜು