Advertisement
ಇಂದು ಬೆಳಿಗ್ಗೆ ಏಳು ಗಂಟೆಗೆ ಆರಂಭವಾದ ಮತದಾನ ಪ್ರಕ್ರಿಯೆ ಸಂಜೆ ಆರು ಗಂಟೆಯವರೆಗೆ ನಡೆಯಲಿದೆ. ಉಡುಪಿ, ದಕ್ಷಿಣಕನ್ನಡ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ನಡೆಯುತ್ತಿದ್ದು ಮತದಾರರು ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸುತ್ತಿದ್ದಾರೆ.
ಮತದಾನ ಪ್ರಕ್ರಿಯೆ ಆರಂಭಗೊಳ್ಳುತ್ತಿದ್ದಂತೆ ಸೋಮೇಶ್ವರ ಪೇಟೆಯಲ್ಲಿರುವ ಮತದಾನ ಕೇಂದ್ರದಲ್ಲಿ ಮತಯಂತ್ರ ಕೈಕೊಟ್ಟು ಮತದಾರರು ಕೆಲ ಹೊತ್ತು ಕಾಯುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಪಡುಬಿದ್ರಿ, ಶಿರ್ವ, ಕಾಪು, ಕಾರ್ಕಳ, ಸೋಮೇಶ್ವರ, ಕೂರ್ಗಿ, ಬಂಟ್ವಾಳ, ಬೆಳ್ತಂಗಡಿ ಸೇರಿ ಹಲವು ಕಡೆಗಳಲ್ಲಿ ಬಿರುಸಿನ ಮತದಾನ ನಡೆಯುತ್ತಿದೆ, ಒಂದೆಡೆ ಬಿಸಿಲಿನ ತಾಪಮಾನ, ಇನ್ನೊಂದೆಡೆ ಶುಭ ಕಾರ್ಯಕ್ರಮಗಳು ಹೀಗೆ ಮತದಾರರು ಬೆಳಿಗ್ಗೆಯೇ ಮತಗಟ್ಟೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೇರಿರುವುದು ವಿಶೇಷವಾಗಿದೆ.
Related Articles
Advertisement