Advertisement

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

11:22 PM Apr 22, 2024 | Shreeram Nayak |

ಮುದ್ದೇಬಿಹಾಳ: ಎ.26ರಂದು ಬೆಳಗ್ಗೆ 10ಕ್ಕೆ ವಿಜಯಪುರ ನಗರಕ್ಕೆ ಎಐಸಿಸಿ ವರಿಷ್ಠ ರಾಹುಲ್‌ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ಆಗಮಿಸಲಿದ್ದು, ಪಕ್ಷದ ಅಭ್ಯರ್ಥಿ ರಾಜು ಅಲಗೂರ ಪರ ಬಹಿರಂಗ ಪ್ರಚಾರ, ಸಭೆ ನಡೆಸಲಿದ್ದಾರೆ ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್‌ ತಿಳಿಸಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೆ ಮನಮೋಹನ ಸಿಂಗ್‌ ಪ್ರಧಾನಿಯಾಗಿದ್ದಾಗ ರೈತರ 72,000 ಕೋಟಿ ರೂ. ಸಾಲ ಮನ್ನಾ ಮಾಡಿದ್ದರು. ಈ ಚುನಾವಣೆಯಲ್ಲಿ ನಮ್ಮ ಸರಕಾರ ಬಂದರೆ ಅದೇ ಮಾದರಿಯಲ್ಲಿ ರೈತರ ಸಾಲ ಮನ್ನಾ ಮಾಡುವ ಯೋಜನೆ ನಮ್ಮ ಪ್ರಣಾಳಿಕೆಯಲ್ಲಿದೆ ಎಂದರು.

 

Advertisement

Udayavani is now on Telegram. Click here to join our channel and stay updated with the latest news.

Next