Advertisement

Lok Sabha result:ಜುಕರ್‌ಬರ್ಗ್‌ ಸುಳ್ಳು ಬಯಲು ಮಾಡಿದ ಅಶ್ವಿ‌ನಿ ವೈಷ್ಣವ್‌

12:54 AM Jan 14, 2025 | Team Udayavani |

ಹೊಸದಿಲ್ಲಿ: 2024ರ ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ ಕೂಟ ಸೋಲನುಭವಿಸಿದೆ ಎಂದು ಹೇಳುವ ಮೂಲಕ ಫೇಸ್‌ಬುಕ್‌ ಮುಖ್ಯಸ್ಥ ಮಾರ್ಕ್‌ ಜುಕರ್‌ಬರ್ಗ್‌ ವಿವಾದ ಮೈಮೇಲೆಳೆದು­­ಕೊಂ­ಡಿ­ದ್ದಾರೆ. ಆದರೆ ಅವರ ಹೇಳಿಕೆ ಸುಳ್ಳು ಎಂದು ಟ್ವೀಟ್‌ ಮಾಡುವ ಮೂಲಕ ಸಚಿವ ಅಶ್ವಿ‌ನಿ ವೈಷ್ಣವ್‌ ತಿರುಗೇಟು ನೀಡಿದ್ದಾರೆ.

Advertisement

ಪಾಡ್‌ಕಾಸ್ಟ್‌ವೊಂದರಲ್ಲಿ ಮಾತನಾಡಿದ ಜುಕರ್‌ಬರ್ಗ್‌, ಸಾರ್ವಜನಿಕವಾಗಿ ಮೂಡಿರುವ ಅಸ­ಮಾಧಾನವು ವಿಶ್ವಾದ್ಯಂತ ಚುನಾವಣೆ ಮೇಲೆ ಪ್ರಭಾವ ಬೀರಿದೆ. ಭಾರತವೂ ಸೇರಿದಂತೆ 2024ರಲ್ಲಿ ನಡೆದ ಚುನಾವಣೆಗಳಲ್ಲಿ ಈವರೆಗೆ ಅಧಿಕಾರದಲ್ಲಿದ್ದವರು ಅಧಿಕಾರ ಕಳೆದುಕೊಂಡಿದ್ದಾರೆ. ಕೋವಿಡ್‌ ಎದುರಿಸಲು ಸರಕಾರಗಳು ವಿಫ‌ಲವಾದ ಹಿನ್ನೆಲೆಯಲ್ಲಿ ಅಧಿಕಾರ ಹೋಗಿದೆ’ ಎಂದು ಹೇಳಿದ್ದಾರೆ.

ಸುಳ್ಳು ಹೇಳಿಕೆ: ಜುಕರ್‌ಬರ್ಗ್‌ ಅವರ ಹೇಳಿಕೆ ಖಂಡಿಸಿರುವ ಕೇಂದ್ರ ಸಚಿವ ಅಶ್ವಿ‌ನಿ ವೈಷ್ಣವ್‌, ಫೇಸ್‌ಬುಕ್‌ನ ಮುಖ್ಯಸ್ಥ ಸುಳ್ಳು ಮಾಹಿತಿಯನ್ನು ಹಂಚುತ್ತಿದ್ದಾರೆ. ಅಲ್ಲದೇ ಕೋವಿಡ್‌ ಸಾಂಕ್ರಾಮಿಕದ ಸಮಯದಲ್ಲಿ ಭಾರತ ಸಮರ್ಥವಾಗಿ ಪರಿಸ್ಥಿತಿಯನ್ನು ನಿಭಾಯಿಸಿದ ಕಾರಣ 2024ರಲ್ಲಿ ಎನ್‌ಡಿಎ ಜಯಗಳಿಸಿದೆ. ಪ್ರಧಾನಿ ಮೋದಿ ಅವರು ಸತತ 3ನೇ ಬಾರಿಗೆ ಭಾರತದ ಪ್ರಧಾನಿಯಾಗಿದ್ದಾರೆ ಎಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.