Advertisement

BJP- CM Shinde ನೇತೃತ್ವದ ಶಿವಸೇನೆ ನಡುವೆ ಲೋಕಸಭೆಯ ಸೀಟು ಹಂಚಿಕೆ ಮಾತುಕತೆ ನಡೆದಿಲ್ಲ

04:58 PM May 26, 2023 | Team Udayavani |

ಮುಂಬಯಿ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್‌ ಶಿಂಧೆ ನೇತೃತ್ವದ ಶಿವಸೇನೆ ಮುಂದಿನ ವರ್ಷದ ಸಾರ್ವತ್ರಿಕ ಚುನಾವಣೆಯಲ್ಲಿ ರಾಜ್ಯದ ಒಟ್ಟು 48 ಲೋಕಸಭಾ ಸ್ಥಾನಗಳ ಪೈಕಿ 22 ರಲ್ಲಿ ಹಕ್ಕು ಸಾಧಿಸಲು ಯೋಜಿಸಿದೆ ಎಂಬ ವರದಿಗಳ ನಡುವೆ ಬಿಜೆಪಿಯ ಹಿರಿಯ ನಾಯಕ ಮತ್ತು ಸಚಿವ ಸುಧೀರ್‌ ಮುಂಗಂತಿವಾರ್‌ ಅವರು, ಎರಡು ಆಡಳಿತಾರೂಢ ಮಿತ್ರಪಕ್ಷಗಳ ನಡುವೆ ಸೀಟು ಹಂಚಿಕೆಯ ಮಾತುಕತೆ ಇನ್ನೂ ನಡೆಯಬೇಕಿದೆ ಎಂದು ಶುಕ್ರವಾರ ಹೇಳಿದ್ದಾರೆ.

Advertisement

ರಾಜ್ಯದಲ್ಲಿ ಶಿಂಧೆ ನೇತೃತ್ವದ ಶಿವಸೇನೆಯೊಂದಿಗೆ ಅಧಿಕಾರವನ್ನು ಹಂಚಿಕೊಂಡಿರುವ ಬಿಜೆಪಿ ಲೋಕಸಭಾ ಸ್ಥಾನಗಳ ತನ್ನ ಮಿತ್ರಪಕ್ಷದ ಬೇಡಿಕೆಗಳನ್ನು ಒಪ್ಪಿಕೊಳ್ಳುವ ಮನಸ್ಥಿತಿಯಲ್ಲಿಲ್ಲ ಎಂಬ ವರದಿಗಳ ಬಗ್ಗೆ ಕೇಳಿದಾಗ, ಮುಂಗಂತಿವಾರ್‌ ಅವರು ಯಾವುದೇ ಬಿಜೆಪಿ ನಾಯಕರಿಗೆ ಇಲ್ಲ ಎಂದು ಸಮರ್ಥಿಸಿಕೊಂಡು, ಶಿಂಧೆ ಅವರ ಎಲ್ಲಾ ಬೇಡಿಕೆಗಳನ್ನು ಒಪ್ಪುವುದಿಲ್ಲ ಎಂದು ಹೇಳಿದರು.

ಮುಂಬಯಿಯ ರಾಜಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸ್ಕೃತಿ ಸಚಿವರು, ಸೀಟು ಹಂಚಿಕೆಗೆ ಯಾವುದೇ ಸೂತ್ರವನ್ನು ಇನ್ನೂ ನಿರ್ಧರಿಸಲಾಗಿಲ್ಲ ಎಂದು ಹೇಳಿದರು. ಏಕನಾಥ್‌ ಶಿಂಧೆ ಅವರ ಬೇಡಿಕೆಗಳನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಬಿಜೆಪಿಯ ಯಾವ ನಾಯಕರೂ ಹೇಳಿಲ್ಲ. ಜನರ ಹಿತಾಸಕ್ತಿ ಕಾಪಾಡುವ ಸರಕಾರವನ್ನು ನೀಡಲು ಶಿಂಧೆ ಬಿಜೆಪಿಯೊಂದಿಗೆ ಕೈಜೋಡಿಸಿದರು. ಅವರ ಬೇಡಿಕೆಗಳನ್ನು ಗೌರವಿಸಲಾಗುವುದು. ಈ ಹಿಂದೆ ಬಾಳಾಸಾಹೇಬ್‌ ಠಾಕ್ರೆ ಮತ್ತು ಈಗ ಏಕನಾಥ್‌ ಶಿಂಧೆ ನೇತೃತ್ವದ ಶಿವಸೇನೆ ಬಗ್ಗೆ ಬಿಜೆಪಿ ಹೆಚ್ಚಿನ ಗೌರವವನ್ನು ಹೊಂದಿದೆ ಎಂದು ಅವರು ಹೇಳಿದರು. ಶಿಂಧೆ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫ‌ಡ್ನವೀಸ್‌ ಇಬ್ಬರೂ ಒಟ್ಟಿಗೆ ಕುಳಿತು ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ಸ್ಥಾನಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಸಚಿವರು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next