Advertisement

‘ಲೋಕಾ’ಭ್ರಷ್ಟಾಚಾರ ಪ್ರಕರಣ: ಅರ್ಜಿ ಇತ್ಯರ್ಥ

01:30 AM Jun 14, 2019 | Team Udayavani |

ಬೆಂಗಳೂರು: ನ್ಯಾ.ವೈ.ಭಾಸ್ಕರ್‌ ರಾವ್‌ ಲೋಕಾಯುಕ್ತರಾಗಿದ್ದಾಗ ಅವರ ಕಚೇರಿಯಲ್ಲಿಯೇ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ಗುರುವಾರ ಇತ್ಯರ್ಥಗೊಳಿಸಿತು.

Advertisement

ಸಮಾಜ ಪರಿವರ್ತನಾ ಸಮುದಾಯ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಎಸ್‌.ಆರ್‌.ಹಿರೇಮs್ ಮತ್ತು ಇತರೆ ಮೂವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಗುರುವಾರ ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕ್‌ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಆಗ, ಸಿಬಿಐ ಪರ ವಕೀಲರು ವಾದ ಮಂಡಿಸಿ, ಈ ಪ್ರಕರಣದಲ್ಲಿ ಈಗಾಗಲೇ ತನಿಖೆಯನ್ನು ಪೂರ್ಣಗೊಳಿಸಿರುವ ಎಸ್‌ಐಟಿ, ವಿಚಾರಣಾ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಹ ಸಲ್ಲಿಸಿದೆ ಎಂದು ನ್ಯಾಯಪೀಠದ ಗಮನಕ್ಕೆ ತಂದರು. ವಾದ ಆಲಿಸಿದ ನ್ಯಾಯಪೀಠ, ಹಾಗಿದ್ದರೆ, ಈ ಹಂತದಲ್ಲಿ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂಬ ಅರ್ಜಿದಾರರ ಕೋರಿಕೆ ಊರ್ಜಿತವಾಗುವುದಿಲ್ಲ ಎಂದು ಅಭಿಪ್ರಾಯಪಟ್ಟು ಅರ್ಜಿಯನ್ನು ವಿಲೇವಾರಿ ಮಾಡಿತು. ಸಾಂವಿಧಾನಿಕ ಸಂಸ್ಥೆಯಾಗಿರುವ ಲೋಕಾಯುಕ್ತ ಕಚೇರಿಯಲ್ಲಿ ಭ್ರಷ್ಟಾಚಾರ ನಡೆದಿರುವುದು ಅತ್ಯಂತ ಗಂಭೀರ ವಿಚಾರ. ಇದರಿಂದಾಗಿ ಲೋಕಾಯುಕ್ತ ಸಂಸ್ಥೆ ಮೇಲಿನ ಜನರ ವಿಶ್ವಾಸ ಕಡಿಮೆ ಆಗಿದೆ. ಆದ್ದರಿಂದ ನಿಷ್ಪಕ್ಷಪಾತ ತನಿಖೆ ನಡೆದು ಸತ್ಯಾಂಶ ಹೊರಬಂದು, ಲೋಕಾಯುಕ್ತ ಸಂಸ್ಥೆಯ ಮೇಲಿನ ಜನರ ವಿಶ್ವಾಸ ಮರುಸ್ಥಾಪಿತವಾಗಬೇಕು. ಹಾಗಾಗಿ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಅರ್ಜಿದಾರರು ಕೋರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next