Advertisement
ತಾಲೂಕಿನ ಚಪ್ಪರದ ಕಲ್ಲು ಸರ್ಕಲ್‌ನಲ್ಲಿರುವ ಜಿಲ್ಲಾ ಸಂಕೀರ್ಣದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಚುನಾವಣಾ ನೀತಿ ಸಂಹಿತೆಗೆ ಸಂಬಂಧಿಸಿದಂತೆ ಸಭೆಯಲ್ಲಿ ಮಾತನಾಡಿ, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮೊದಲ ಹಂತದಲ್ಲಿ ನಡೆಯುವ ಚಿಕ್ಕಬಳ್ಳಾಪುರ ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಮಾ.26 ಕೊನೆಯ ದಿನವಾಗಿದೆ.
Related Articles
Advertisement
ಸಾಮಾಜಿಕ ಜಾಲತಾಣ ಮೇಲೆ ನಿಗಾ: ಜಿಲ್ಲೆಯಲ್ಲಿ 76 ಟೀಂಗಳನ್ನು ಮಾಡಲಾಗಿದ್ದು, ಎಲ್ಲಾ ಮತದಾರರು ನಿಭೀರ್ತಿಯಿಂದ ಮತ ಚಲಾಯಿಸುವಂತೆ ಅರಿವು ಮೂಡಿಸುವ ಕೆಲಸವನ್ನು ಮಾಡಲಾಗುತ್ತಿದೆ. ಇನ್ನು ಮತದಾರರಿಗೆ ಅರಿವು ಮೂಡಿಸಲು ವಿವಿಪ್ಯಾಟ್‌ನ ಜಾಗೃತಿ ಕಾರ್ಯ ಮಾ.15ರ ವರೆಗೆ ನಡೆಯಲಿದೆ.
ವಿವಿಪ್ಯಾಟ್ ಕಡ್ಡಾಯವಾಗಿರುವುದರಿಂದ ಈಗಾಗಲೇ ಎಲ್ಲಾ ಮತದಾರರು ತಪ್ಪದೆ ಮತ ಚಲಾಯಿಸುವಂತೆ ಅರಿವು ಮೂಡಿಸಲಾಗಿದೆ. ವಿಶೇಷವಾಗಿ ಎಲ್ಲಾ ಸಾಮಾಜಿಕ ಜಾಲತಾಣಗಳ ಮೇಲೆ ಹಾಗೂ ವಾಟ್ಸ್‌ಆ್ಯಪ್ ಸೇರಿದಂತೆ ಎಲ್ಲವನ್ನು ಗಮನಿಸಲಾಗುತ್ತಿದೆ. ವಾಟ್ಸ್ ಆ್ಯಪ್ ಗ್ರೂಪ್‌ಗ್ಳಲ್ಲಿ ನೀತಿ ಸಂಹಿತೆ ಉಲ್ಲಂಘನೆಯಾದಲ್ಲಿ ಗ್ರೂಪ್ ಅಡ್ಮಿನ್ ಮೇಲೆ ನೇರವಾಗಿ ಕ್ರಮ ಜರುಗಿಸಲಾಗುತ್ತದೆ ಎಂದು ತಿಳಿಸಿದರು.
ಫ್ಲೆಯಿಂಗ್ ಸ್ಕ್ವಾಡ್ ನೇಮಕ: ಅನಧಿಕೃತವಾಗಿ ಇನ್ನೂ ಫ್ಲೆಕ್ಸ್ ಮತ್ತು ಬ್ಯಾನರ್‌ಗಳು ಕಂಡು ಬಂದಲ್ಲಿ ಕೂಡಲೇ ಗಮನಕ್ಕೆ ತನ್ನಿ ನಾವು ಅವರ ಮೇಲೆ ಪ್ರಕರಣ ದಾಖಲಿಸುವ ಮೂಲಕ ಕ್ರಮಕೈಗೊಳ್ಳಲಾಗುವುದು. 101 ಸೆಕ್ಟರ್ ಆಫೀಸರ್, 27 ಫ್ಲೆಯಿಂಗ್ ಸ್ಕ್ವಾಡ್‌ಗಳನ್ನು ನೇಮಿಸಲಾಗಿದೆ. 5 ವಿಡಿಯೋ ಫ್ಲೆಯಿಂಗ್ ಅಧಿಕಾರಿಗಳನ್ನು ಸಹ ನೇಮಿಸಲಾಗಿದೆ ಎಂದು ಆದೇಶ ಹೊರಡಿಸಿದ್ದಾರೆ. ಜಿಪಂ ಸಿಇಒ ಆರ್.ಲತಾ, ಅಬಕಾರಿ ಇಲಾಖೆಯ ಜಿಲ್ಲಾ ಅಧಿಕಾರಿ ವಿಕಾಸ್, ಜಿಪಂ ಮುಖ್ಯ ಲೆಕ್ಕಾಧಿಕಾರಿ ಶೋಭಾ, ಚುನಾವಣಾ ಶಿರಸ್ಥೆದಾರ್ ಮೈಕಲ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.
ದೂರು ನೀಡಿ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಹಾಯವಾಣಿ ಸಂಖ್ಯೆ 1800-4255-1950ಗೆ ಸಂಪರ್ಕಿಸಬಹುದು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಬಕಾರಿ ಇಲಾಖೆಯ ಸಂಬಂಧಿಸಿದಂತೆ ಸಾರ್ವಜನಿಕರು 2019ರ ಲೋಕಸಭಾ ಚುನಾವಣೆಯ ಸಂಬಂಧ ಮದ್ಯ ಹಾಗೂ ಅಬಕಾರಿ ವಸ್ತುಗಳ ಹೊಂದುವಿಕೆ, ದಾಸ್ತಾನು ಸಾಗಾಣಿಕೆ, ಮಾರಾಟ ಇತ್ಯಾದಿ ಅಬಕಾರಿ ಅಕ್ರಮಗಳ ಯಾವುದೇ ದೂರುಗಳು/ಮಾಹಿತಿಗಳನ್ನು ಇಲಾಖಾ ನಿಯಂತ್ರಣಾ ಕೊಠಡಿಯ ಸಹಾಯವಾಣಿ ಸಂಖ್ಯೆ 1800-425-5273ಕ್ಕೆ ಕರೆ ಮಾಡಿ ತಿಳಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಕರೀಗೌಡ ತಿಳಿಸಿದರು.