Advertisement

Lokapura: ಬಕ್ರೀದ್ ಹಬ್ಬದ ನಿಮಿತ್ತ ಮುಸ್ಲಿಂ ಬಾಂಧವರಿಂದ ವಿಶೇಷ ಪ್ರಾರ್ಥನೆ

12:44 PM Jun 17, 2024 | |

ಲೋಕಾಪುರ: ಪಟ್ಟಣದ  ಹೊರ ವಲಯದಲ್ಲಿರುವ ಈದ್ಗಾ ಮೈದಾನದಲ್ಲಿ ಬಕ್ರೀದ್ ಹಬ್ಬದ ನಿಮಿತ್ತ ಸಮಸ್ತ ಮುಸ್ಲಿಂ ಬಾಂಧವರು (ಈದುಲ್ ಅಜಹಾ) ವಿಶೇಷ ಪ್ರಾರ್ಥನೆ ಸಲ್ಲಿಸುವುದರ ಮೂಲಕ ಆಚರಿಸಿದರು.

Advertisement

ನಂತರ ಅಂಜುಮನ್-ಎ-ಇಸ್ಲಾಂ ಕಮಿಟಿ ಅಧ್ಯಕ್ಷ ಅಲ್ಲಾಸಾಬ ಯಾದವಾಡ ಅವರು ತ್ಯಾಗ ಬಲಿದಾನ ಸಂಕೇತವಾದ ಬಕ್ರೀದ್ ಹಬ್ಬದ ಕುರಿತು ಮಾತನಾಡಿದರು.

ಮೌಲನಾ ಹಾಬಿಲ್ ಪ್ರಾರ್ಥನೆಯ ನೇತೃತ್ವ ವಹಿಸಿದ್ದರು. ಸಾಮೂಹಿಕ ಪ್ರಾರ್ಥನೆ ಮುಗಿದ ಬಳಿಕ ಮುಸ್ಲಿಂ ಬಾಂಧವರು ಪರಸ್ಪರ ಹಸ್ತಲಾಘವ ಮಾಡಿ ಹಬ್ಬದ ಶುಭಾಶಯಗಳನ್ನು ಕೋರಿದರು.

ಲೋಕಾಪುರ ಪಟ್ಟಣದ ಎಲ್ಲ ಸಮಾಜ ಬಾಂಧವರು ಮುಸ್ಲಿಂ ಬಾಂಧವರಿಗೆ ಬಕ್ರೀದ್ ಹಬ್ಬದ ಶುಭಾಶಯ ತಿಳಿಸಿದರು. ಈ ವೇಳೆ ಮುಸ್ಲಿಂ ಸಮಾಜದ ಹಿರಿಯರು, ಮುಖಂಡರು, ಯುವಕರು, ಮಕ್ಕಳು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next