Advertisement
ಮೂರನೇ ಬಾರಿಗೆ ಪ್ರಧಾನಮಂತ್ರಿಯಾದ ಬಳಿಕ ೧೮ನೇ ಲೋಕಸಭೆಯ ಮೊದಲ ಅಧಿವೇಶನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣಕ್ಕೆ ವಂದನಾ ನಿರ್ಣಯ ಸಲ್ಲಿಸಿ ಮಾತನಾಡುವ ವೇಳೆ ವಿಪಕ್ಷ ಇಂಡಿಯಾ ಕೂಟದ ಸದಸ್ಯರು ಘೋಷಣೆಗಳ ಕೂಗುತ್ತ ಅಡ್ಡಿಪಡಿಸುತ್ತಿದ್ದರೂ ಭಾಷಣ ಮುಂದುವರಿಸಿದ ಪ್ರಧಾನಿ ಮೋದಿ ಪ್ರತಿಪಕ್ಷಗಳು ಮತ್ತು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಟೀಕಾ ಪ್ರಹಾರ ನಡೆಸಿದರು.
Related Articles
Advertisement
ಲೋಕಸಭೆ ಚುನಾವಣೆಯಲ್ಲಿಈ ಬಾರಿ ಕಾಂಗ್ರೆಸ್ 99 ಸ್ಥಾನಗಳ ಗಳಿಸಿತು. ಇದು ಮಗುವಿನ ಕತೆ ನೆನಪಿಗೆ ತರುತ್ತದೆ. ಮಗುವೊಂದು ತಾನು 99 ಅಂಕಗಳನ್ನು ಪಡೆದಿದ್ದೇನೆ ಎಂದು ಎಲ್ಲರಿಗೂ ಹೇಳಿ ಖುಷಿ ಪಡುತ್ತಿತ್ತು. ಅದನ್ನು ಕೇಳಿ ಎಲ್ಲರೂ ಆ ಮಗುವಿನ ಬೆನ್ನು ತಟ್ಟುತ್ತಿದ್ದರು. ಆಗ ಬಂದ ಟೀಚರ್ ಆ ಮಗುವಿನ ಬಳಿ ನೀನೇಕೆ ಸ್ವೀಟ್ ಹಂಚುತ್ತಿದ್ದೀಯ? ಎಂದು ಕೇಳಿದರು. ವಾಸ್ತವದ ವಿಷಯ ಏನೆಂದರೆ ಆ ಮಗು 100ಕ್ಕೆ 99 ಅಂಕ ಪಡೆದಿದೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಆ ಮಗುವಿಗೆ 543ರಲ್ಲಿ 99 ಅಂಕ ಪಡೆದಿತ್ತು ಎಂದು ಮೋದಿ ಹಾಸ್ಯಾಸ್ಪದವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ ಕಾಲೆಳೆದಿದ್ದಾರೆ.
ಮೋದಿ ಭಾಷಣ ಪ್ರಮುಖಾಂಶಗಳು 1. ಭ್ರಷ್ಟಾಚಾರದ ವಿರುದ್ಧ ಶೂನ್ಯ ಸಹಿಷ್ಣುತೆಯ ನೀತಿಗಾಗಿ ದೇಶವು ಎನ್‌ಡಿಎಗೆ ಮತ ಹಾಕಿದೆ. 2047ರ ಭಾರತ ಸಂಪೂರ್ಣವಾಗಿ ಬದಲಾಗಿರಲಿದೆ. ನಾವು ಜನರಿಗಾಗಿ 24 ಗಂಟೆಯೂ ಕೆಲಸ ಮಾಡುತ್ತಿದ್ದೇವೆ. 2. “ಕಾಂಗ್ರೆಸ್ ಮತ್ತು ಅದರ ಪರಿಸರ ವ್ಯವಸ್ಥೆಯು ನಮ್ಮನ್ನು ಸೋಲಿಸಿದೆ ಎಂದು ಜನರ ಮೇಲೆ ಪ್ರಭಾವ ಬೀರಲು ಪ್ರಯತ್ನಿಸುತ್ತಿದೆ. ಕಾಂಗ್ರೆಸ್‌ಗೆ ಜನರ ಜನಾದೇಶವೆಂದರೆ ವಿರೋಧ ಪಕ್ಷದಲ್ಲಿ ಕುಳಿತುಕೊಳ್ಳುವುದು. ಕಾಂಗ್ರೆಸ್ ಸತತ ಮೂರು ಬಾರಿ 100 ಅಂಕಗಳನ್ನು ದಾಟಲು ಸಾಧ್ಯವಾಗಲಿಲ್ಲ. 3. ನಮ್ಮ ಮೂರನೇ ಅವಧಿ ಎಂದರೆ ೨೦೪೭ರ ವಿಕಸಿತ ಭಾರತಕ್ಕಾಗಿ ಮೂರು ಪಟ್ಟು ಹೆಚ್ಚು ಶಕ್ತಿ ಹಾಕಿ ಕೆಲಸದ ವೇಗ ಮೂರು ಪಟ್ಟು ಹೆಚ್ಚಿಸುವುದಾಗಿದೆ.