Advertisement

Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ

09:10 PM Nov 16, 2024 | Team Udayavani |

ಉಡುಪಿ: ನಿವೃತ್ತ ಶಿಕ್ಷಕರೊಬ್ಬರಿಗೆ ಪಿಂಚಣಿ ಹಣವನ್ನು ಬಿಡುಗಡೆಗೊಳಿಸಲು ಲಂಚ ಪಡೆಯುತ್ತಿದ್ದ ವೇಳೆ ಉಡುಪಿ ಖಜಾನೆಯ ಉಪನಿರ್ದೇಶಕರು ಹಾಗೂ ಸಹಾಯಕ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಶನಿವಾರ ನಡೆದಿದೆ.

Advertisement

ನಿವೃತ್ತ ಶಿಕ್ಷಕ ಹಿತೇಂದ್ರ ಭಂಡಾರಿ ಎಂಬವರು ತಮ್ಮ ಪಿಂಚಣಿ ಹಣವನ್ನು ಪಡೆಯಲು ಕಳೆದ 5 ತಿಂಗಳಿನಿಂದ ಖಜಾನೆಯ ಉಪನಿರ್ದೇಶಕರಾದ ರವಿಕುಮಾರ್‌ ಮತ್ತು ಸಹಾಯಕ ರಾಘವೇಂದ್ರ ಎಂಬವರು ಸತಾಯಿಸುತ್ತಿದ್ದು 5 ಸಾವಿರ ರೂ. ಲಂಚ ನೀಡುವಂತೆ ಒತ್ತಾಯಿಸಿದ್ದರು. ಈ ಬಗ್ಗೆ ಹಿತೇಂದ್ರ ಭಂಡಾರಿಯವರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು.

ಈ ದೂರಿನಂತೆ ಶನಿವಾರು ಉಡುಪಿ ಪ್ರಭಾರ ಲೋಕಾಯುಕ್ತ ಡಿವೈಎಸ್ಪಿ ಮಂಜುನಾಥ್‌ ಅವರ ತಂಡ ಹಾಗೂ ಮಂಗಳೂರು ಲೋಕಾಯುಕ್ತ ಸುರೇಶ್‌ ಹಾಗೂ ಕೆ.ಎನ್‌. ಚಂದ್ರಶೇಖರ್‌ ಅವರನ್ನೊಳಗೊಂಡ ತಂಡ ದಾಳಿ ನಡೆಸಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಖಜಾನೆಯ ಉಪನಿರ್ದೇಶಕರು, ಸಹಾಯಕನನ್ನು ವಶಕ್ಕೆ ಪಡೆದಿದ್ದಾರೆ.

ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಸಿಬಂದಿ ನಾಗರಾಜ, ಸತೀಶ್‌, ಪ್ರಸನ್ನ, ರಮೇಶ್‌, ಸೂರಜ್‌, ಸುಧೀರ್‌, ರಾಘವೇಂದ್ರ, ಪುಷ್ಪಲತಾ, ಮಲ್ಲಿಕಾ ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next