Advertisement

ಕೋಳಿವಾಡ ವಿರುದ್ಧ ಲೋಕಾಕ್ಕೆ ದೂರು

06:00 AM Jun 27, 2018 | Team Udayavani |

ಬೆಂಗಳೂರು: ಕರ್ನಾಟಕ ವಿಧಾನಸಭಾ ಸಚಿವಾಲಯದ ವಿವಿಧ ಹುದ್ದೆಗಳ ನೇರ ನೇಮಕಾತಿಯಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಆರೋಪಿಸಿ ವಿಧಾನಸಭೆಯ ಮಾಜಿ ಸ್ಪೀಕರ್‌ ಕೆ.ಬಿ. ಕೋಳಿವಾಡ ಹಾಗೂ ಕಾರ್ಯದರ್ಶಿ ಎಸ್‌. ಮೂರ್ತಿ ವಿರುದಟಛಿ ಲೋಕಾಯುಕ್ತದಲ್ಲಿ ದೂರು ದಾಖಲಿಸಲಾಗಿದೆ. ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವಾಗ ಕಾನೂನು
ಮತ್ತು ನಿಯಮಗಳಿಗೆ ವಿರುದ್ಧಛಿವಾಗಿ ನೇಮಕಾತಿ ನಡೆಸಲಾಗಿದೆ ಎಂದು  ಆರೋಪಿಸಿ ಆರ್‌ಟಿಐ ಕಾರ್ಯಕರ್ತ ಪ್ರಸನ್ನಕುಮಾರ್‌ ಎಂಬುವರು ಮಂಗಳವಾರ ಲೋಕಾಯುಕ್ತ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ಸಂಜಯ್‌ ಸಹಾಯ್‌ ಅವರಿಗೆ ದೂರು ನೀಡಿದ್ದಾರೆ ವಿಧಾನಸಭೆ ಸಚಿವಾಲಯದಲ್ಲಿ ನಿಯಮಗಳನ್ನು ಪಾಲಿಸದೆ 2017ರ ಫೆ.23 ರಿಂದ 25ರವರೆಗೆ ತರಾತುರಿಯಲ್ಲಿ ಸಂದರ್ಶನ ನಡೆಸಿ 191 ಮಂದಿಯನ್ನು ವಿವಿಧ ಹುದ್ದೆಗಳಿಗೆ ನೇಮಕ ಮಾಡಲಾಗಿದೆ. ಇದರಲ್ಲಿ ವ್ಯಾಪಕ ಅಕ್ರಮ ಮತ್ತು ಭ್ರಷ್ಟಾಚಾರ ನಡೆದಿದೆ. ಅಲ್ಲದೇ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವಾಗ ಯಾವುದೇ ಹುದ್ದೆಗಳನ್ನು ಸೃಷ್ಟಿವಂತಿಲ್ಲ. ಆದರೆ, 2018ರ ವಿಧಾನಸಭೆ ಚುನಾವಣೆಗೆ ಒಂದು ವಾರದ ಮೊದಲು ಹೊಸದಾಗಿ 107 ಹುದ್ದೆಗಳನ್ನು ಸೃಷ್ಟಿಸಲಾಗಿದೆ. ಈ ಎರಡೂ ಪ್ರಕರಣಗಳನ್ನು ತಕ್ಷಣ
ತನಿಖೆಗೊಳಪಡಿಸಿಬೇಕು ಎಂದು ದೂರಿನಲ್ಲಿ ಕೋರಲಾಗಿದೆ. ಕೆ.ಬಿ.ಕೋಳಿವಾಡ, ಎಸ್‌.ಮೂರ್ತಿ, ಸ್ಪೀಕರ್‌ ಅವರ ವಿಶೇಷ ಅಧಿಕಾರಿಯಾಗಿದ್ದ ತಿಪ್ಪೇಸ್ವಾಮಿ ವಿರುದ್ಧ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕರಿಣ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಆಗ್ರಹಿಸಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next