Advertisement
ಕವಾಡಿಗರಹಟ್ಟಿಗೆ ನೀರು ಪೂರೈ ಸುವ ಓವರ್ ಹೆಡ್ ಟ್ಯಾಂಕ್ ಬಳಿಗೆ ತೆರಳಿ ಪರಿಶೀಲಿಸಿದರು. ಅನಂತರ ಅಂಗನವಾಡಿಯಲ್ಲಿ ತಾತ್ಕಾಲಿಕವಾಗಿ ತೆರೆದಿರುವ ಚಿಕಿತ್ಸಾ ಕೇಂದ್ರಕ್ಕೆ ಭೇಟಿ ನೀಡಿದರು. ಲೋಕಾಯುಕ್ತರ ಭೇಟಿ ವೇಳೆ ಇಬ್ಬರು ಶುಶ್ರೂಷಕರು ಮಾತ್ರ ಕರ್ತವ್ಯದಲ್ಲಿದ್ದರು. ವೈದ್ಯರು ಹಾಜರಿರಲಿಲ್ಲ. ಇದಕ್ಕೆ ಲೋಕಾಯುಕ್ತರು ಅಸಮಾಧಾನ ವ್ಯಕ್ತಪಡಿಸಿದರು.
ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಪ್ರಕರಣದಲ್ಲಿ ಅಸ್ವಸ್ಥಗೊಂಡವರ ಚಿಕಿತ್ಸೆಗಾಗಿ ತಾತ್ಕಾಲಿಕ ಚಿಕಿತ್ಸಾ ಕೇಂದ್ರ ತೆರೆದು, ಅಗತ್ಯ ಔಷಧ ಹಾಗೂ ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
Related Articles
ಬೆಳಗ್ಗೆ 7.30ಕ್ಕೆ ನಗರಕ್ಕೆ ಆಗಮಿಸಿ ಮೆದೇಹಳ್ಳಿ ರಸ್ತೆ, ಬಿ.ಡಿ. ರಸ್ತೆ, ಜೆಸಿಆರ್, ಹೊರಪೇಟೆ, ರಾಷ್ಟ್ರೀಯ ಹೆದ್ದಾರಿ ಸರ್ವಿಸ್ ರಸ್ತೆಗಳಲ್ಲಿ ಲೋಕಾಯುಕ್ತರು ಸಂಚಾರ ನಡೆಸಿದರು. ಈ ವೇಳೆ ರಸ್ತೆ ಬದಿ ಎಲ್ಲೆಂದರಲ್ಲಿ ಕಸ ಬಿದ್ದಿರುವುದು, ಖಾಲಿ ನಿವೇಶನದಲ್ಲಿ ಕಸದ ರಾಶಿ ಕಂಡು ನಗರಸಭೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
Advertisement