Advertisement
ತೇಜ್‌ರಾಜ್ ಶರ್ಮಾ ಎಂಬ ಯುವಕ ಕೃತ್ಯ ಎಸಗಿದ್ದಾನೆ. ವಿಶ್ವನಾಥ್ ಶೆಟ್ಟಿ ಅವರ ಸ್ಥಿತಿ ಗಂಭೀರವಾಗಿದ್ದು ಮಲ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಹಿರಿಯ ಪೊಲೀಸ್ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯದ ಬಗ್ಗೆ ವಿಚಾರಣೆ ನಡೆಸಿದ್ದಾರೆ. ಆಸ್ಪತ್ರೆಯಲ್ಲಿರುವ ತಜ್ಞ ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ವಿವಿಧ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ.ದೇಹಸ್ಥಿತಿ ಗಂಭೀರವಾಗಿದ್ದರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.
Related Articles
Advertisement
ವಿಚಾರ ತಿಳಿದ ತಕ್ಷಣ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲಾ ಕಾರ್ಯಕ್ರಮಗಳನ್ನು ಬದಿಗೊತ್ತಿ ಮಲ್ಯ ಆಸ್ಪತ್ರೆಗೆ ದೌಡಾಯಿಸಿ ಪೊಲೀಸ್ ಅಧಿಕಾರಿಗಳು, ಆಸ್ಪತ್ರೆಯ ವೈದ್ಯರ ಬಳಿ ತುರ್ತು ಸಭೆ ನಡೆಸುತ್ತಿದ್ದಾರೆ. ಆಸ್ಪತ್ರೆಯ ಸುತ್ತ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.