ಮಂಗಳೂರು: ಮೂಲ್ಕಿ ತಾಲೂಕು ಪರಿಶಿಷ್ಟ ಜಾತಿ ಮತ್ತು ಪಂಗಡದವರ ವಸತಿ ನಿಲಯಕ್ಕೆ ಮಂಗಳವಾರ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದು ಈ ವೇಳೆ ನೈರ್ಮಲ್ಯ ಮತ್ತು ಸ್ವತ್ಛತೆಯ ಕೊರತೆ ಕಂಡುಬಂದಿದೆ.
ಮೂಲ್ಕಿ ತಾಲೂಕಿಗೆ ಸಂಬಂಧಿಸಿದ ಸಾರ್ವಜನಿಕ ಅಹವಾಲು ಸ್ವೀಕಾರ ಸಭೆ ಮೂಲ್ಕಿ ಸಮುದಾಯ ಭವನ ಸಭಾಂಗಣದಲ್ಲಿ ಜರಗಿತು. ಕಂದಾಯ ಇಲಾಖೆ, ಪುರಸಭೆಗೆ ಸಂಬಂಧಿಸಿ ದೂರುಗಳನ್ನು ಸ್ವೀಕರಿಸಲಾಯಿತು. ಕೆಲವು ದೂರುಗಳನ್ನು ಸ್ಥಳದಲ್ಲೇ ಪರಿಹರಿಸಲಾಯಿತು. ಸಭೆಯ ಅನಂತರ ಅಧಿಕಾರಿಗಳು ವಸತಿ ನಿಲಯಕ್ಕೆ ಭೇಟಿ ನೀಡಿದರು.
ವಸತಿ ನಿಲಯದಲ್ಲಿ ನೈರ್ಮಲ್ಯ ಮತ್ತು ಸ್ವತ್ಛತೆಗೆ ಸೂಕ್ತ ಕ್ರಮ ಕೈಗೊಳ್ಳಲು ಸಂಬಂಧಿಸಿದ ಇಲಾಖೆಗೆ ವರದಿ ನೀಡಲಾಗುವುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಸಿ.ಎ. ಸೈಮನ್ ತಿಳಿಸಿದ್ದಾರೆ.