Advertisement

ಬಿಡಿಎ ಕಚೇರಿ ಮೇಲೆ ದಿಢೀರ್ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು

04:23 PM Feb 10, 2023 | Team Udayavani |

ಬೆಂಗಳೂರು : ಲೋಕಾಯುಕ್ತ ಅಧಿಕಾರಿ ಶುಕ್ರವಾರ ಭಾರಿ ಕಾರ್ಯಾಚರಣೆ ನಡೆಸಿದ್ದು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಚೇರಿಯ(ಬಿಡಿಎ) ಮೇಲೆ ದಿಢೀರ್ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

Advertisement

ಲೋಕಾಯುಕ್ತ ಎಸ್ ಪಿ ಅಶೋಕ್ ಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಆರು ತಂಡಗಳಲ್ಲಿ ಹಲವು ಮಂದಿ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿರುವ ಕುರಿತು ವಾದಿಯಾಗಿದೆ. ಬಿಡಿಎ ಅಧಿಕಾರಿಗಳು ಮತ್ತು ಸಿಬಂದಿಗಳ ಸಮ್ಮುಖದಲ್ಲೇ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.

ಬಿಡಿಎ ಸೈಟ್ ಹಂಚಿಕೆಯಲ್ಲಿ ಅಕ್ರಮ ಸೇರಿದಂತೆ ಹಲವು ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದ್ದು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next