Advertisement

MUDA case; ಸಿಎಂ ಸಿದ್ದರಾಮಯ್ಯ ವಿಚಾರಣೆಗೆ ಕರೆದ ಲೋಕಾಯುಕ್ತ ಪೊಲೀಸರು

07:52 PM Nov 04, 2024 | Team Udayavani |

ಮೈಸೂರು: ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಲೋಕಾಯುಕ್ತ ಪೊಲೀಸರು ನವೆಂಬರ್ 6 ರಂದು ವಿಚಾರಣೆಗೆ ಕರೆದಿದ್ದಾರೆ ಎಂದು ಅಧಿಕೃತ ಮೂಲಗಳು ಸೋಮವಾರ(ನ4) ತಿಳಿಸಿವೆ.

Advertisement

“ನಾವು ಅವರನ್ನು ಬುಧವಾರ (ನವೆಂಬರ್ 6) ಬೆಳಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಹೇಳಿದ್ದೇವೆ” ಎಂದು ಹಿರಿಯ ಲೋಕಾಯುಕ್ತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೈಸೂರಿನ ಲೋಕಾಯುಕ್ತ ಪೊಲೀಸರು ಸೆಪ್ಟೆಂಬರ್ 27 ರಂದು ದಾಖಲಿಸಿರುವ ಎಫ್‌ಐಆರ್‌ನಲ್ಲಿ ಸಿದ್ದರಾಮಯ್ಯ, ಅವರ ಪತ್ನಿ, ಬಾಮೈದ ಮಲ್ಲಿಕಾರ್ಜುನ ಸ್ವಾಮಿ ಮತ್ತು ದೇವರಾಜು ಸ್ವಾಮಿ ಮತ್ತು ಇತರರನ್ನು ಹೆಸರಿಸಲಾಗಿದೆ. ಅಕ್ಟೋಬರ್ 25 ರಂದು ಪ್ರಕರಣದ ಆರೋಪಿಯಾಗಿರುವ ಮುಖ್ಯಮಂತ್ರಿ ಪತ್ನಿ ಪಾರ್ವತಿ ಅವರನ್ನು ವಿಚಾರಣೆ ನಡೆಸಿದ್ದರು.

ವಿಚಾರಣೆಗೆ ಹಾಜರಾಗುವುದಾಗಿ ಸಿಎಂ ಸಿದ್ದರಾಮಯ್ಯ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಶಿಗ್ಗಾವಿಯ ಹುರುಳಿಕುಪ್ಪಿಯಲ್ಲಿ ಸಿಎಂ ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next