Advertisement
ನೋಂದಣಿ, ನವೀಕರಣಕ್ಕೆ ಬಂದ ಅರ್ಜಿಗಳನ್ನು ಮತ್ತು ಸಕಾಲದ ವ್ಯಾಪ್ತಿಯಲ್ಲಿ ಬರುವ ಅರ್ಜಿಗಳನ್ನು ಇತ್ಯರ್ಥ ಗೊಳಿಸದೆ ವಿಳಂಬಿಸಿರುವುದು ಕಂಡುಬಂದಿದೆ. ಕೆಲವುಕಾರ್ಖಾನೆಗಳು ನಿಯಮ ಮೀರಿ ಷರತ್ತು ಉಲ್ಲಂಘಿಸಿ ಕಾರ್ಯಾಚರಣೆ ಮಾಡುತ್ತಿದ್ದು ಅಂತಹ ಕಾರ್ಖಾನೆಗಳ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದಿರುವುದು ಕಂಡುಬಂದಿದೆ. ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯದ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.
ಬುಧವಾರ ಬಂಟ್ವಾಳದಲ್ಲಿ ನಡೆದ ಸಭೆಯಲ್ಲಿ ಸಾರ್ವ ಜನಿಕರಿಂದ 12 ದೂರುಗಳನ್ನು ಸ್ವೀಕರಿಸಿದ್ದು, ಕೆಲವನ್ನು ಸ್ಥಳದಲ್ಲೇ ಪರಿಹರಿಸಲಾಗಿದೆ. ಬಂಟ್ವಾಳ ತಾಲೂಕು ಸರಕಾರಿ ಆಸ್ಪತ್ರೆಗೆ ಅನಿರೀಕ್ಷಿತ ಭೇಟಿ ನೀಡಿ ಚಿಕಿತ್ಸೆಗೆ ಬಂದ ಸಾರ್ವಜನಿಕರು ಹಾಗೂ ಒಳರೋಗಿಗಳಾಗಿ ಚಿಕಿತ್ಸೆ ಪಡೆಯುವವರಲ್ಲಿ ಆಸ್ಪತ್ರೆಯ ಸೇವೆ ಮತ್ತು ಸೌಲಭ್ಯಗಳ ಬಗ್ಗೆ ವಿಚಾರಿಸಿ ಮಾಹಿತಿ ಪಡೆದುಕೊಳ್ಳಲಾಗಿದೆ. ಪ್ರಸೂತಿ ತಜ್ಞರ ಮತ್ತು ವೈದ್ಯರ ಹುದ್ದೆ ಖಾಲಿ ಇರುವ ಬಗ್ಗೆ ಶೀಘ್ರ ಕ್ರಮ ಕೈಗೊಳ್ಳಲು ಇಲಾಖೆಗೆ ವರದಿ ಸಲ್ಲಿಸಲಾಗುವುದು ಎಂದು ಅಧೀಕ್ಷಕರು ತಿಳಿಸಿದ್ದಾರೆ.