ಕೊಪ್ಪಳ: ಅಪಾರ ಆಸ್ತಿಗಳಿಸಿದ ಆರೋಪದ ಮೇಲೆ ಅಧಿಕಾರಿಯೊಬ್ಬರ ಮನೆ ಮೇಲೆ ಲೋಕಾಯುಕ್ತ ತಂಡ ದಾಳಿ ನಡೆಸಿದೆ.
ಕೊಪ್ಪಳದ ಕೆಆರ್ ಐಡಿಲ್ ಇಂಜಿನೀಯರ್ ಶರಣಪ್ಪ ಚಿಂಚೋಳಿಕರ್ ಅವರ ನಿವಾಸ ಹಾಗೂ ಕಚೇರಿಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: Kushtagi; ಅಕ್ರಮ ಸಂಬಂಧ; ಮನನೊಂದು ಪ್ರೇಮಿಗಳು ಆತ್ಮಹತ್ಯೆ
ರಾಯಚೂರು ಲೋಕಾಯುಕ್ತ ಜಿಲ್ಲಾ ವರಿಷ್ಠಾಧಿಕಾರಿ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, ಶರಣಪ್ಪ ಚಿಂಚೋಳಿಕರ್ ಅವರಿಗೆ ಸಂಬಂಧಿಸಿದ ಕೊಪ್ಪಳ, ಕಲಬುರಗಿ ಹಾಗು ಬೀದರಿನಲ್ಲಿನ ಶರಣಪ್ಪ ಮನೆಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.
ಅಪಾರ ಆಸ್ತಿ ಗಳಿಸಿದ ಆರೋಪ ಹಿನ್ನೆಲೆ ದಾಳಿ ನಡೆದಿದೆ. ಲೋಕಾಯುಕ್ತ ಅಧಿಕಾರಿಗಳ ತಂಡ ದಾಖಲೆಗಳನ್ನು ಪರಿಶೀಲಿಸಿದ್ದಾರೆ.