Advertisement
ರಾಮನಗರ, ಮಡಿಕೇರಿ,ದಾವಣಗೆರೆ, ಬೀದರ್ ಸೇರಿದಂತೆ 50 ಕ್ಕೂ ಹೆಚ್ಚಿನ ಕಡೆಗಳಲ್ಲಿ ಲೋಕಾಯುಕ್ತ ದಾಳಿ ನಡೆಸಿದೆ.
Related Articles
Advertisement
ನಟರಾಜ್ ಅವರು ಕನಕಪುರದ ಶಿವನಹಳ್ಳಿ ಗ್ರಾಮದಲ್ಲಿ ಭವ್ಯ ಬಂಗಲೆ ಹೊಂದಿದ್ದು ಗ್ರಾಮದಲ್ಲೇ 7.5 ಎಕರೆ ತೆಂಗಿನತೋಟ, ಅಡಿಕೆ ತೋಟ ಹೊಂದಿದ್ದಾರೆ ಎನ್ನಲಾಗಿದೆ ದಾಳಿ ನಟರಾಜ್ ನಾಪತ್ತೆಯಾಗಿದ್ದು ಕೆಲಸಕ್ಕಿದ್ದ ಕಾರ್ಮಿಕರಿಂದ ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ. ಅಲ್ಲದೆ ಮನೆಯಲ್ಲಿದ್ದ ದಾಖಲೆ ಪತ್ರಗಳನ್ನು ಅಧಿಕಾರಿಗಳು ಸಂಗ್ರಹಿಸಿದ್ದಾರೆ.
ಮಡಿಕೇರಿ: ಕೊಡಗು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ ನಿವಾಸದ ಮೇಲೆ ಲೋಕಾಯುಕ್ತ ದಾಳಿ:
ಮಡಿಕೇರಿ: ಕೊಡಗು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ ನಿವಾಸದ ಮೇಲೆ ಲೋಕಾಯುಕ್ತ ದಾಳಿಯಾಗಿದೆ. ಮುಂಜಾನೆ 4 ಗಂಟೆಗೆ ಡಾ.ನಂಜುಂಡೇಗೌಡ ಅವರ ಮಡಿಕೇರಿ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಲೋಕಾಯುಕ್ತ ಎಸ್ ಪಿ. ಸುರೇಶ್ ಬಾಬು ಮಾರ್ಗದರ್ಶನದಲ್ಲಿ ಡಿ ವೈ ಎಸ್ ಪಿ. ಪವನ್ ಕುಮಾರ್ , ಇನ್ಸ್ ಪೆಕ್ಟರ್ ಲೋಕೇಶ್ ಮತ್ತು ಸಿಬ್ಬಂದಿಗಳು ಪರಿಶೀಲನೆ ಕೈಗೊಂಡಿದ್ದಾರೆ.
ಪಿರಿಯಾಪಟ್ಟಣದಲ್ಲಿ ಇರುವ ಮಾವನ ಮನೆ ಹಾಗೂ ಮೈಸೂರಿನಲ್ಲಿ ಇರುವ ಸಂಬಂಧಿಕರ ಮನೆ ಮೇಲೂ ಏಕಕಾಲದಲ್ಲಿ ಲೋಕಾಯುಕ್ತ ದಾಳಿ ಮಾಡಿದ್ದು ಮಡಿಕೇರಿ ಮನೆಯಲ್ಲಿ ನಗದು ಪತ್ತೆಯಾಗಿದ್ದು, ತನಿಖೆ ಮುಂದುವರೆದಿದೆ.
ಬೀದರ್: ಆದಾಯಕ್ಕಿಂದ ಹೆಚ್ಚಿನ ಆಸ್ತಿ: ಕಾನ್‌ಸ್ಟೇಬಲ್ ಮನೆಗೆ ಲೋಕಾಯುಕ್ತ ರೇಡ್:
ಹುಮನಾಬಾದ: ಚಿಟಗುಪ್ಪ ಪೊಲೀಸ್ ಠಾಣೆಯ ಕಾನ್ ಸ್ಟೇಬಲ್ ಒಬ್ಬರು ಆದಾಯಕ್ಕಿಂತ ಹೆಚ್ಚು ಅಸ್ತಿ ಹೊಂದಿರುವ ಆರೋಪ ಹಿನ್ನೆಲೆಯಲ್ಲಿ ಲೋಕಾಯುಕ್ತ ಆಧಿಕಾರಿಗಳು ಗುರುವಾರ ಬೆಳಗಿನ ಜಾವ ದಾಳಿ ನಡೆಸಿದ್ದಾರೆ.
ವಿಜಯಕುಮಾರ ಎಂಬುವರ ಹುಮನಾಬಾದ ಪಟ್ಟಣದ ಟೀಚರ್ಸ್ ಬಡಾವಣೆ ಮನೆ ಹಾಗೂ ಬೀದರ್ ತಾಲೂಕಿನ ಹೊಚ್ಚಕನಳ್ಳಿ ಗ್ರಾಮದಲ್ಲಿನ ಮನೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.
ಆದಾಯಕ್ಕಿಂತ ಹೆಚ್ಚಿನ ಸಂಪಾದನೆ ಕುರಿತು ಅಧಿಕಾರಿಗಳು ಶೋಧ ಕಾರ್ಯ ಮುಂದುವರೆಸಿದಾರೆ. ಲೋಕಾಯುಕ್ತ ಡಿವೈಎಸ್ಪಿ ಓಲೇಕರ್ ಅವರ ನೇತೃತ್ವದಲ್ಲಿ ದಾಳಿ ನಡೆದಿದೆ.
ದಾವಣಗೆರೆ: ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್, ಬಿಬಿಎಂಪಿ ಎಇಇ ನಿವಾಸದ ಮೇಲೆ ದಾಳಿ:
ದಾವಣಗೆರೆ: ಚಿತ್ರದುರ್ಗ ತಾಲೂಕಿನ ಹೊಳಲ್ಕೆರೆ ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ ಕೆ.ಮಹೇಶ್ ಹಾಗೂ ಬಿಬಿಎಂಪಿ ಎಇಇ ಎಚ್.ಭಾರತಿ ಅವರ ದಾವಣಗೆರೆಯಲ್ಲಿನ ಜಯನಗರದಲ್ಲಿರುವ ನಿವಾಸದ ಮೇಲೆ ಗುರುವಾರ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ ಎಚ್. ಮಹೇಶ್ ದಾವಣಗೆರೆಯ ಜಯನಗರದಲ್ಲಿ ವಾಸವಾಗಿದ್ದಾರೆ. ಅವರ ಪತ್ನಿ ಎಚ್. ಭಾರತಿ ದಾವಣಗೆರೆ ಮಹಾನಗರ ಪಾಲಿಕೆಯ ಇಂಜಿನಿಯರ್ ಆಗಿ ಕೆಲಸ ಮಾಡಿದ್ದರು. ಪ್ರಸ್ತುತ ಬಿಬಿಎಂಪಿ ಎಇಇ ಆಗಿದ್ದಾರೆ. ಲೋಕಾಯುಕ್ತ ಎಸ್ಪಿ ವಾಸುದೇವರಾಮ್, ಡಿವೈಎಸ್ಪಿ ಮೃತ್ಯುಂಜಯ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.
ಆದಾಯಕ್ಕೂ ಮೀರಿ ಅಕ್ರಮ ಆಸ್ತಿ ಸಂಪಾದನೆ ದೂರು ಹಿನ್ನೆಲೆ ಲೋಕಾಯುಕ್ತ ದಾಳಿ, ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಈವರೆಗೆ 1ಕೆಜಿಗೂ ಅಧಿಕ ಚಿನ್ನಾಭರಣ, 15ಲಕ್ಷ ನಗದು ಪತ್ತೆಯಾಗಿದೆ.