ಇಂಡಿ : ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಉಪ ನೋಂದಣಾಧಿಕಾರಿಗಳ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ಬುಧವಾರ ದಾಳಿ ನಡೆಸಿದ್ದಾರೆ.
ಇಂಡಿ ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ವ್ಯಾಪಕ ಲಂಚ ಪಡೆಯುತ್ತಾರೆಂದು ಸಾರ್ವಜನಿಕರಿಂದ ವ್ಯಾಪಕ ದೂರು ಕೇಳಿ ಬಂದ ಹಿನ್ನಲೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ.
ಲೋಕಾಯುಕ್ತ ಎಸ್ಪಿ ಅನಿತಾ ಹದ್ದಣ್ಣವರ , ಡಿವೈಎಸ್ಪಿ ಅರುಣ ನಾಯಕ, ಇನ್ಸಪೆಕ್ಟರ್ ಗಳಾದ ಆನಂದ ಟಕ್ಕಟಣ್ಣವರ ಹಾಗೂ ಆನಂದ ಡೋಣಿ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಇಂಡಿ ಪಟ್ಟಣದ ಮಿನಿ ವಿಧಾನಸೌಧದ ಕಟ್ಟಡದಲ್ಲಿರುವ ಕಚೇರಿಯಲ್ಲಿ ತಾಲೂಕು ಸಬ್ ರಿಜಿಸ್ಟರ್ ಮಹಮ್ಮದ್ ರಫಿ ಪಟೇಲ್, ಕೆಲ ಎಜೆಂಟರನ್ನು ವಿಚಾರಣೆ ನಡೆಸಿದ್ದಾರೆ.
ಕಚೇರಿಯಲ್ಲಿನ ದಾಖಲಾತಿಗಳ ಪರಿಶೀಲನೆ ನಡೆಸುತ್ತಿದ್ದು, ದಾಖಲಾತಿ ಪರಿಶೀಲನಾ ಕಾರ್ಯ ಮುಂದುವರಿದಿದೆ.