Advertisement

ಧೂಳಖೇಡ ಚೆಕ್ ಪೊಸ್ಟ್ ಮೇಲೆ ಲೋಕಾಯುಕ್ತ ದಾಳಿ

02:23 PM Sep 30, 2022 | keerthan |

ವಿಜಯಪುರ: ಮಹಾರಾಷ್ಟ್ರ ಗಡಿಯಲ್ಲಿರುವ ಜಿಲ್ಲೆಯ ಚಡಚಣ ತಾಲ್ಲೂಕಿನ ಧೂಳಖೇಡ ಚೆಕ್ ಪೋಸ್ಟ್ ಮೇಲೆ ಶುಕ್ರವಾರ ವಿಜಯಪುರ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದು, ಪರಿಶೀಲನೆ ನಡೆಸಿದ್ದಾರೆ.

Advertisement

ವಿಜಯಪುರ ಲೋಕಾಯುಕ್ತ ಎಸ್ಪಿ ಅನಿತಾ ಹದ್ದನವರ, ಡಿಎಸ್ಪಿ ಅರುಣ ನಾಯಕ, ಪುಷ್ಪಲತಾ, ಸಿಪಿಐ ಮಹೇಂದ್ರ ನಾಯಕ, ಆನಂದ ದೋಣಿ, ಆನಂದ ಕಕ್ಕನವರ ಸೇರಿ 20 ಕ್ಕೂ ಹೆಚ್ಚು ಸಿಬ್ಬಂದಿಗಳಿದ್ದ ಲೋಕಾಯುಕ್ತ ತಂಡ ಕರ್ನಾಟಕ- ಮಹಾರಾಷ್ಟ್ರ ರಾಜ್ಯಗಳ ಗಡಿಯಲ್ಲಿರುವ ಧೂಳಖೇಡ ಚೆಕ್ ಪೋಸ್ಟ್ ಮೇಲೆ ದಾಳಿ ನಡೆಸಿದ್ದಾರೆ.

ಶುಕ್ರವಾರ ನಸುಕಿನ 5 ಗಂಟೆಗೆ ಧೂಳಖೇಡ ಚೆಕ್ ಪೋಸ್ಟ್ ಮೇಲೆ ಲೋಕಾಯುಕ್ತ ಎಸ್.ಪಿ. ನೇತೃತ್ವದಲ್ಲಿ ತಂಡ ದಾಳಿ ನಡೆಸಿದೆ. ಸುಮಾರು 8-10 ಜನ ಗೃಹ ರಕ್ಷಕ ದಳದ ಸಿಬ್ಬಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಈ ವೇಳೆ 3-4‌ ಲಕ್ಷ ರೂ. ವಶಕ್ಕೆ ಪಡೆದಿರುವ ಲೋಕಾಯಕ್ತರು, ಆರ್.ಟಿ.ಒ. ಅಧಿಕಾರಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next