ಡಾ.ಉಮೇಶ್ 1995ರಲ್ಲಿ ವೈದ್ಯಾಧಿಕಾರಿಯಾಗಿ ಸೇವೆಗೆ ನೇಮಕವಾಗಿದ್ದು, 2023 ರಿಂದ ಕಡೂರು ತಾಲೂಕು ವೈದ್ಯಾಧಿ ಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
Advertisement
ಇವರು 2020 ರಿಂದ 2023 ರ ವರೆಗೆ ಚಿಕ್ಕಮಗಳೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ.
ಪತ್ನಿ ಟಿ.ಎಸ್.ಮಂಜುಳ ಹಾಗೂ ಕುಟುಂಬ ಸದಸ್ಯರ ಹೆಸರಿನಲ್ಲಿ ಸ್ಥಿರಾಸ್ತಿಯನ್ನು ಖರೀದಿ ಮಾಡಿದ್ದಾರೆ. ಇಬ್ಬರು ಮಕ್ಕಳು ರಾಯಚೂರು ಮತ್ತು ದಾವಣಗೆರೆ ಮೆಡಿಕಲ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಸಂಪಾದನೆ ಮಾಡಿದ ಆರೋಪದ ಹಿನ್ನಲೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಪ್ರಕರಣ ದಾಖಲಿಸಿದ್ದಾರೆ.