Advertisement
ಚಿತ್ರದುರ್ಗದಲ್ಲಿ ಇಬ್ಬರು ಅಧಿಕಾರಿಗಳಾದ ಅರಣ್ಯ ಇಲಾಖೆ ACF ನಾಗೇಂದ್ರ ನಾಯ್ಕ್, ಸಮಾಜ ಕಲ್ಯಾಣ ಇಲಾಖೆಯ ಎ.ಡಿ ಕೃಷ್ಣಮೂರ್ತಿ ಮನೆಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.ಲೋಕಾಯುಕ್ತ ಎಸ್ಪಿ ವಾಸುದೇವರಾಮ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ಅರಣ್ಯ ಇಲಾಖೆ ACF ನಾಗೇಂದ್ರ ನಾಯ್ಕ್ ಮನೆ ಮೇಲೆ ದಾಳಿ ನಡೆಸಿದ ತಂಡ ಹಿರಿಯೂರು ನಗರದ ಚಂದ್ರಾ ಲೇಔಟ್ ಮನೆ ಹಾಗೂ ತವಂದಿ ಗ್ರಾಮದ ಬಳಿ ಇರುವ ಫಾರ್ಮ್ ಹೌಸ್ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.
ರಾಮನಗರದಲ್ಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕೆಆರ್ ಡಿಎಲ್ ಇಂಜಿನಿಯರ್ ಮಾವನ ಮನೆ ಮೇಲೆ ದಾಳಿ ನಡೆಸಿದ್ದಾರೆ, ಬೆಂಗಳೂರಿನಲ್ಲಿ ಕೆಆರ್‌ಡಿಎಲ್ ನಲ್ಲಿ ಕಾರ್ಯ ನಿರ್ವಹಿಸುತ್ತಿರೋ ಶಶಿಕುಮಾರ್. ಶಶಿ ಕುಮಾರ್ ಮಾವ ರಾಮಲಿಂಗಯ್ಯ ಮನೆ ಮೇಲೆ ದಾಳಿ ನಡೆಸಿ ಅಗತ್ಯ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
Related Articles
Advertisement
ಇದನ್ನೂ ಓದಿ: Lokayuktha raid: ಕ್ಯಾಶುಟೆಕ್ ಯೋಜನಾ ನಿರ್ದೇಶಕ ಪಟ್ಟೇದ್ ಮನೆ ಮೇಲೆ ಲೋಕಾ ದಾಳಿ