Advertisement

ಲೋಕಾಯುಕ್ತಕ್ಕೆ ಬೇರೆ ಹೆಸರು ಶಿಫಾರಸ್ಸಿಲ್ಲ

03:50 AM Jan 19, 2017 | Team Udayavani |

ಬೆಂಗಳೂರು: ಲೋಕಾಯುಕ್ತ ಸ್ಥಾನಕ್ಕೆ ನ್ಯಾ.ವಿಶ್ವನಾಥ ಶೆಟ್ಟಿ ಹೆಸರು ಶಿಫಾರಸು ಮಾಡಿದ್ದನ್ನು ರಾಜ್ಯಪಾಲರು ವಾಪಸ್‌ ಕಳುಹಿಸಿರುವ ಬಗ್ಗೆ ರಾಜ್ಯ ಸಚಿವ ಸಂಪುಟದಲ್ಲಿ ಚರ್ಚಿಸಲಾಯಿತು. 

Advertisement

ಶಿಫಾರಸಿಗೆ ಬದ್ಧವಾಗಿರಲು ಸಂಪುಟ ಸಭೆ ನಿರ್ಧರಿಸಿದ್ದು, ರಾಜ್ಯಪಾಲರು ಕೇಳಿದ ಸ್ಪಷ್ಟನೆಗೆ ಸೂಕ್ತ ವಿವರಣೆ ಕಳುಹಿಸಿಕೊಡಲು ತೀರ್ಮಾನಿಸಲಾಯಿತು. 

ಈ ಮಧ್ಯೆ, ಸಂಪುಟ ಸಭೆಗೂ ಮುನ್ನ ಸುದ್ದಿಗಾರರ ಜತೆ ಮಾತನಾಡಿದ ಸಿದ್ದರಾಮಯ್ಯ, ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ಹೆಸರನ್ನು ಲೋಕಾಯುಕ್ತ ಹುದ್ದೆಗೆ ಶಿಫಾರಸು ಮಾಡಲಾಗಿದೆ. ಆದರೆ, ರಾಜ್ಯಪಾಲರು ಕೆಲವು ಸ್ಪಷ್ಟೀಕರಣ ಕೇಳಿದ್ದಾರೆ. ಸ್ಪಷ್ಟೀಕರಣ ಕಳುಹಿಸುತ್ತೇವೆ. ಬೇರೊಬ್ಬ ನ್ಯಾಯಮೂರ್ತಿ ಹೆಸರು ಶಿಫಾರಸು ಮಾಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಹೇಳಿದರು. 

Advertisement

Udayavani is now on Telegram. Click here to join our channel and stay updated with the latest news.

Next