Advertisement

ಮುಖ್ಯ ಕಾರ್ಯದರ್ಶಿಗೆ ಚಾಟಿ ಬೀಸಿದ ಲೋಕಾಯುಕ್ತ

06:35 AM Sep 28, 2018 | Team Udayavani |

ಬೆಂಗಳೂರು: ವಿವಿಧ ಪ್ರಕರಣಗಳಲ್ಲಿ ಲೋಕಾಯುಕ್ತದಿಂದ ತನಿಖೆ ಎದುರಿಸಿ ಶಿಕ್ಷೆಗೊಳಗಾಗಿರುವ ಅಧಿಕಾರಿಗಳ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಲು ಹಿಂದೇಟು ಹಾಕುತ್ತಿರುವ ಬಗ್ಗೆ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ್‌ ಭಾಸ್ಕರ್‌ಗೆ ಮೌಖೀಕವಾಗಿ ಚಾಟಿ ಬೀಸಿದ್ದಾರೆ ಎಂದು ತಿಳಿದು ಬಂದಿದೆ.

Advertisement

ಭ್ರಷ್ಟಾಚಾರ ನಿಯಂತ್ರಣಕ್ಕೆ ಲೋಕಾಯುಕ್ತ ಶ್ರಮಿಸುತ್ತಿದ್ದು, ಆದರೆ, ಇದಕ್ಕೆ ಸರ್ಕಾರ ಸರಿಯಾಗಿ ಸ್ಪಂದಿಸುತ್ತಿಲ್ಲ. ವಿವಿಧ ದೂರುಗಳು ಬಂದ ಹಿನ್ನೆಲೆಯಲ್ಲಿ ಆರೋಪಿತ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಿ ತಕ್ಷಣ ಕ್ರಮ ಜರುಗಿಸಲು ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗಿದೆ. ಆದರೆ, ಸರ್ಕಾರ ಈ ಬಗ್ಗೆ ಗಂಭೀರವಾಗಿ ಪರಿಗಣಿಸುತ್ತಿಲ್ಲ. ತಪ್ಪಿತಸ್ಥ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುವ ಬದಲು ಸರ್ಕಾರ ದಂಡನೆಗೊಳಗಾದ ಅಧಿಕಾರಿಯಿಂದ ಸ್ಪಷ್ಟನೆ ಕೇಳುತ್ತಿದೆ. ಅಧಿಕಾರಿಯಿಂದ ಸ್ಪಷ್ಟನೆ ಕೇಳುವ ವ್ಯವಸ್ಥೆ ನಿಲ್ಲಬೇಕು ಎಂದು ಲೋಕಾಯುಕ್ತರು ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಲೋಕಾಯುಕ್ತರ ಸೂಚನೆ ಹಿನ್ನೆಲೆಯಲ್ಲಿ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್‌ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಿ ಮೂರು ತಿಂಗಳಲ್ಲಿ ವರದಿ ನೀಡುವಂತೆ ಇಲಾಖಾ ಮುಖ್ಯಸ್ಥರಿಗೆ  ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next