ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಜನಾಭಿಪ್ರಾಯಕ್ಕೆ ತಲೆಬಾಗುವುದಾಗಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಚುನಾವಣೆ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಸೋಲು-ಗೆಲು ವುಗಳು ರಾಜಕೀಯ ಜೀವನದ ಅವಿಭಾಜ್ಯ ಅಂಗ. ಇದೇ ಪ್ರಜಾಪ್ರಭುತ್ವದ ಸೌಂದರ್ಯ. ನಮ್ಮ ಪಕ್ಷದ ಸೋಲು ಅನಿರೀಕ್ಷಿತವಾಗಿದ್ದರೂ ಜನಾಭಿಪ್ರಾಯಕ್ಕೆ ತಲೆ ಬಾಗಬೇಕಾಗುತ್ತದೆ ಎಂದು ಹೇಳಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಮತ್ತು ಎಚ್.ಡಿ.ದೇವೇಗೌಡರ ಸೋಲನ್ನು ಯಾರೂ ಊಹಿಸಿರಲಿಲ್ಲ. ಇಂತಹ ಸೋಲಿಗೆ ಖಂಡಿತ ಇಬ್ಬರು ನಾಯಕರೂ ಅರ್ಹರಾಗಿರಲಿಲ್ಲ. ಹಿರಿಯ ನಾಯಕರು ಲೋಕಸಭೆಯಲ್ಲಿ ಇದ್ದಿದ್ದರೆ ಅದರ ಲಾಭ ಕರ್ನಾಟಕಕ್ಕೆ ಸಂದಾಯವಾಗುತ್ತಿತ್ತು. ಎರಡೂ ಕ್ಷೇತ್ರಗಳ ಮತದಾರರು ಇವರನ್ನು ಸೋಲಿಸಿ ರಾಜ್ಯಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಚುನಾವಣೆಯಲ್ಲಿ ಗೆದ್ದಿರುವ ಭಾರತೀಯ ಜನತಾ ಪಕ್ಷಕ್ಕೆ ಮತ್ತು ಈ ಗೆಲುವಿನಲ್ಲಿ ಮುಖ್ಯ ಪಾತ್ರ ವಹಿಸಿದ್ದ ಪ್ರಧಾನಿ ನರೇಂದ್ರ ಮೋದಿಯ ವರಿಗೆ ಅಭಿನಂದನೆ ಸಲ್ಲಿಸಿರುವ ಸಿದ್ದರಾಮಯ್ಯ, ಮುಂದಿನ ಐದು ವರ್ಷಗಳ ಕಾಲ ಜನ ಮೆಚ್ಚು ವಂತಹ, ಇಡೀ ದೇಶವನ್ನು ಕುವೆಂಪು ಅವರು ಹೇಳಿರುವಂತೆ ಸರ್ವಜನಾಂಗದ ಶಾಂತಿಯ ತೋಟವನ್ನಾಗಿ ಮಾಡುವ ರೀತಿಯಲ್ಲಿ ಆಡಳಿತ ನೀಡಲಿ ಎಂದು ಹಾರೈಸಿದ್ದಾರೆ.
ಕುಂದಗೋಳ ವಿಧಾನಸಭಾ ಕ್ಷೇತ್ರದಲ್ಲಿ ಕುಸುಮಾ ಶಿವಳ್ಳಿಯವ ರನ್ನು ಗೆಲ್ಲಿಸಿರುವುದಕ್ಕೆ ಕ್ಷೇತ್ರದ ಮತಾದರ ರಿಗೆ ಅಭಿನಂದನೆಗಳು. ದಿ.ಸಿ.ಎಸ್. ಶಿವಳ್ಳಿಯವರು ಮಾಡಿದ ಅಭಿವೃದ್ಧಿ ಕಾರ್ಯಗಳು, ಅವರ ಮೇಲೆ ಕ್ಷೇತ್ರದ ಜನರು ಇಟ್ಟಿರುವ ಅಗಾಧ ಪ್ರೀತಿ, ಗೌರವ ಅವರ ಪತ್ನಿ ಗೆಲುವಿನ ದಡ ಮುಟ್ಟಿಸಿದೆ.
ಡಿ.ಕೆ.ಶಿವಕುಮಾರ್, ಸಚಿವ
ಜನಾದೇಶವನ್ನು ವಿನಮ್ರತೆಯಿಂದ ಒಪ್ಪಿಕೊಂಡು ಗೌರವಿಸುತ್ತೇನೆ. ಬೀದರ್ ಲೋಕಸಭಾ ಚುನಾವಣೆಯಲ್ಲಿ ಜಯಗಳಿಸಿ ರುವ ಭಗವಂತ ಖೂಬಾ ಹಾಗೂ ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು.
ಈಶ್ವರ್ ಖಂಡ್ರೆ, ಕೆಪಿಸಿಸಿ ಕಾರ್ಯಾಧ್ಯಕ್ಷ
ಚುನಾವಣೆಯಲ್ಲಿ ಜಯಗಳಿಸಿದ ಬಿಜೆಪಿ ಹಾಗೂ ಪ್ರಧಾನಿ ಮೋದಿಯ ವರಿಗೆ ಅಭಿನಂದನೆಗಳು. ಜನರ ಆದೇಶವನ್ನು ನಾವು ವಿನಮ್ರತೆಯಿಂದ ಒಪ್ಪಿಕೊಂಡು ಗೌರವಿಸುತ್ತೇವೆ.
ಎಂ.ಬಿ.ಪಾಟೀಲ್, ಗೃಹ ಸಚಿವ