ಪುಣೆ: ಮಹಾರಾಷ್ಟ್ರದ ಪುಣೆಯಲ್ಲಿ ಮಂಗಳವಾರ ನಡೆದ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಜೊತೆ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ವೇದಿಕೆ ಹಂಚಿಕೊಂಡಿರುವುದು ತೀವ್ರ ಕುತೂಹಲ ಕೆರಳಿಸಿದೆ.
ಸ್ವಾತಂತ್ರ್ಯ ಹೋರಾಟಗಾರ ಬಾಲಗಂಗಾಧರ ತಿಲಕ್ ಅವರ 103ನೇ ಪುಣ್ಯತಿಥಿಯ ಅಂಗವಾಗಿ ಮಹಾರಾಷ್ಟ್ರದ ಪುಣೆಯಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿ ಸ್ವೀಕಾರ ಸಮಾರಂಭದಲ್ಲಿ ಶರದ್ ಪವಾರ್ ಮುಖ್ಯ ಅತಿಥಿಗಳಾಗಿ ಭಾಗಿಯಾಗಿದ್ದರು.
ಪ್ರಧಾನಿ ಮೋದಿಯವರೊಂದಿಗೆ ವೇದಿಕೆ ಹಂಚಿಕೊಳ್ಳಬಾರದು ಎಂದು ವಿರೋಧ ಪಕ್ಷವಾದ ಭಾರತ ಮೈತ್ರಿಕೂಟದ ಸದಸ್ಯರು ಮಾಡಿದ ಮನವಿಯನ್ನು ಶರದ್ ಪವಾರ್ ನಿರಾಕರಿಸಿದ್ದಾರೆ.
ಮೋದಿಯವರಿಗೆ ಲೋಕಮಾನ್ಯ ತಿಲಕ್ ಪ್ರಶಸ್ತಿಯನ್ನು ನೀಡಿ ಅವರ “ಸರ್ವೋಚ್ಚ ನಾಯಕತ್ವ” ಮತ್ತು “ನಾಗರಿಕರಲ್ಲಿ ದೇಶಭಕ್ತಿಯ ಭಾವನೆಯನ್ನು ಜಾಗೃತಗೊಳಿಸುವುದಕ್ಕಾಗಿ” ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.
ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿದ ಪ್ರಧಾನಿ, ಇದು ನನಗೆ ಸ್ಮರಣೀಯ ಕ್ಷಣವಾಗಿದೆ ಎಂದರು. ಭಾರತದ ಸ್ವಾತಂತ್ರ್ಯದಲ್ಲಿ ಲೋಕಮಾನ್ಯ ತಿಲಕರ ಪಾತ್ರ ಹಾಗೂ ಅವರ ಕೊಡುಗೆಯನ್ನು ಕೇವಲ ಪದಗಳಲ್ಲಿ ಹೇಳಲು ಸಾಧ್ಯವಿಲ್ಲ ಎಂದು ತಿಲಕ್ ಅವರನ್ನು ಸ್ಮರಿಸಿದರು.
ಪ್ರಶಸ್ತಿ ಕಾರ್ಯಕ್ರಮದಲ್ಲಿ ಎನ್‌ಸಿಪಿ ಪಕ್ಷದ ಮುಖ್ಯಸ್ಥ ಶರಾದ್ ಪವರ್, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಉಪಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವಿಸ್, ಅಜಿತ್ ಪವಾರ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.