Advertisement

ಹೊಸಬರಿಗೆ ಅವಕಾಶ ನೀಡಿ… ಚಿಕ್ಕಮಗಳೂರು-ಉಡುಪಿ ಬಿಜೆಪಿ ಕಾರ್ಯಕರ್ತರಿಂದ ಕೇಂದ್ರಕ್ಕೆ ಪತ್ರ

02:56 PM Feb 21, 2024 | Team Udayavani |

ಚಿಕ್ಕಮಗಳೂರು: ಲೋಕಸಭೆ ಚುನಾವಣೆ ಸಮೀಪಿಸುತ್ತಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷ ದಲ್ಲಿ ಟಿಕೆಟ್ ಗಾಗಿ ತೆರೆಮರೆಯಲ್ಲಿ ಬಾರೀ ಕಸರತ್ತು ನಡೆಸಲಾಗುತ್ತಿದೆ. ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯಾಗಿದ್ದು ಯಾವ ಕ್ಷೇತ್ರದಿಂದ ಯಾರು ಸ್ಪರ್ಧೆ ಮಾಡಲಿದ್ದಾರೆಂಬ ಚರ್ಚೆ ನಡೆಯುತ್ತಿರುವ ವೇಳೆ ಚಿಕ್ಕಮಗಳೂರು- ಉಡುಪಿ ಕ್ಷೇತ್ರದಿಂದ ಮೂರನೇ ಬಾರಿ ಸ್ಪರ್ಧೆ ಮಾಡುವುದಾಗಿ ಈಗಾಗಲೇ ಹೇಳಿಕೆ ನೀಡಿದ್ದು, ಇದರ ಬೆನ್ನಲ್ಲೆ ಬಿಜೆಪಿ ಕಾರ್ಯಕರ್ತರು ಗೋಬ್ಯಾಕ್ ಶೋಭಾ ಅಭಿಯಾನ ಆರಂಭಿಸಿದ್ದು, ಬಿಜೆಪಿ ರಾಷ್ಟ್ರ ನಾಯಕರಿಗೆ ಪತ್ರ ರವಾನಿಸಿದ್ದಾರೆ.

Advertisement

ಲೋಕಸಭೆ ಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ನೀಡದಂತೆ ಕಳೆದ ಕೆಲವು ತಿಂಗಳ ಹಿಂದೆಯೇ ನಗರದ ಕಲ್ಯಾಣ ಮಂಟಪವೊಂದರಲ್ಲಿ ಕಾರ್ಯಕರ್ತರು ಸಭೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಇದರ ಬೆನ್ನಲೆ ಪ್ರಧಾನಮಂತ್ರಿ ನರೇಂದ್ರ ಮೋದಿ, ಜೆ.ಪಿ.ನಡ್ಡಾ, ಅಮಿತ್ ಶಾ ಅವರಿಗೆ ಅಂಚೆ ಮೂಲಕ ಪತ್ರ ರವಾನಿಸಿದ್ದಾರೆ.

ಶೋಭಾ ಕರಂದ್ಲಾಜೆ ಸ್ಪರ್ಧೆ ವಿರುದ್ದ ಕಳೆದ ಲೋಕಸಭೆ ಚುನಾವಣೆ ವೇಳೆ ಗೋಬ್ಯಾಕ್ ಶೋಭಾ ಅಭಿಯಾನ ನಡೆಸಲಾಗಿತ್ತು. ಕೆಲವು ದಿನಗಳ ಬಳಿಕ ಅಭಿಯಾನ ತೆರೆಮರೆ ಸರಿದಿತ್ತು.

ಶೋಭಾ ಕರಂದ್ಲಾಜೆ ಬಿಜೆಪಿ ಟಿಕೆಟ್ ಗಿಟ್ಟಿಸುವಲ್ಲಿ ಯಶಸ್ವಿಯಾಗಿ ಎರಡನೇ ಬಾರಿಗೆ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಆಯ್ಕೆಯಾಗಿ ಮೋದಿ ಸಂಪುಟದಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಸ್ಥಾನ ಗಿಟ್ಟಿಸುವಲ್ಲಿ ಯಶಸ್ವಿಯಾದರು.

ಶೋಭಾ ಕರಂದ್ಲಾಜೆ ಎರಡು ಬಾರಿ ಆಯ್ಕೆಯಾಗಿದ್ದು ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡಿಲ್ಲ. ಈ ಹಿನ್ನಲೆಯಲ್ಲಿ ಶೋಭಾ ಕರಂದ್ಲಾಜೆ ಅವರಿಗೆ ಬಿಜೆಪಿ ಹೈಕಮಾಂಡ್ ಟಿಕೆಟ್ ನೀಡ ಬಾರದು. ಹೊಸ ಮುಖಕ್ಕೆ ಟಿಕೆಟ್ ನೀಡಬೇಕು ಎಂದು ಪತ್ರ ಬರೆದಿದ್ದಾರೆ.

Advertisement

ಲೋಕಸಭೆ ಚುನಾವಣೆ ಘೋಷಣೆ ಬಾಕಿ ಇದೆ. ಉಡುಪಿ -ಚಿಕ್ಕಮಗಳೂರು ಕ್ಷೇತ್ರದಿಂದ ಕೆಲವು ಹೆಸರುಗಳು ಕೇಳಿ ಬರುತ್ತಿದ್ದು ತರೆಮರೆಯಲ್ಲಿ ಬಾರೀ ಕಸರತ್ತು ನಡೆಯುತ್ತಿದೆ. ತುಮಕೂರು ಮತ್ತು ಜಿಲ್ಲೆಯ ನರಸಿಂಹರಾಜಪುರ ತಾಲೂಕಿ ನಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಶೋಭಾ ಕರಂದ್ಲಾಜೆ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ. ಕ್ಷೇತ್ರ ಬದಲಾವಣೆ ಮಾಡುವ ಪ್ರಶ್ನೆ ಇಲ್ಲ. ಪಕ್ಷ ಬದಲಾವಣೆ ಬಯಸಿದಲ್ಲಿ ಅದನ್ನುವಪಾಲಿಸಿ ತೀರ್ಮಾನಕ್ಕೆ ಬದ್ದವಾಗಿದ್ದೇನೆ ಎಂದಿದ್ದಾರೆ.

ಬಿಜೆಪಿ ಜೆಡಿಎಸ್ ಮೈತ್ರಿಯಾಗಿದ್ದು ಯಾವ ಪಕ್ಷದ ವರಿಗೆ ಉಡುಪಿ-ಚಿಕ್ಕಮಗ ಳೂರು ಕ್ಷೇತ್ರದ ಟಿಕೆಟ್ ಎಂದು ಖಾತ್ರಿಯಾಗಿಲ್ಲ. ಸ್ವ ಪಕ್ಷದ ಕಾರ್ಯಕರ್ತರೇ ಈ ನಡುವೆ ಶೋಭಾ ಕರಂದ್ಲಾಜೆ ವಿರುದ್ದ ಹೈಕಮಾಂಡ್ ಗೆ ಪತ್ರ ರವಾನಿ ಸಿರುವುದು ಬಾರೀ ಕುತೂಹಲ ಕ್ಕೆ ಎಡೆಮಾಡಿಕೊಟ್ಟಿದೆ.

Advertisement

Udayavani is now on Telegram. Click here to join our channel and stay updated with the latest news.

Next