Advertisement

Loksabha Election: ನರಗುಂದ- ಈ ಬಾರಿಯೂ ಕಷ್ಟವಾಗುವುದೇ ಕೈಗೆ?

02:45 PM Jun 03, 2024 | Team Udayavani |

ಉದಯವಾಣಿ ಸಮಾಚಾರ
ನರಗುಂದ:ಬಾಗಲಕೋಟೆ ಲೋಕಸಭೆ ಕ್ಷೇತ್ರ ವ್ಯಾಪ್ತಿಗೆ ಸೇರುವ ಗದಗ ಜಿಲ್ಲೆ ನರಗುಂದ ವಿಧಾನಸಭಾ ಕ್ಷೇತ್ರ ಬಂಡಾಯದ ನೆಲವಾಗಿದ್ದು, ರೈತಪರ ಹೋರಾಟಗಳ ಕರ್ಮಭೂಮಿಯಾಗಿದೆ. ಈ ನೆಲದಲ್ಲಿ ನಡೆದ ಹೋರಾಟಗಳಿಗೆ ಸರ್ಕಾರಗಳೇ ಬೆಚ್ಚಿ ಬಿದ್ದಿರುವ ಉದಾಹರ‌ಣೆಗಳಿವೆ. ಇಲ್ಲಿಂದಲೇ ಆರಂಭವಾದ ಹೋರಾಟಗಳು ರಾಜ್ಯವ್ಯಾಪಿ ಆವರಿಸಿರುವುದು ಇತಿಹಾಸ ಕಣ್ಮುಂದಿದೆ.

Advertisement

ಇದನ್ನೂ ಓದಿ:ದಸರಾ ಹಬ್ಬಕ್ಕೆ ಪ್ಯಾನ್‌ ಇಂಡಿಯಾ ಫೈಟ್:‌ ʼಮಾರ್ಟಿನ್‌ʼಗೆ ರಜಿನಿ, ಜೂ.NTR ಸಿನಿಮಾ ಟಕ್ಕರ್

ದಗ ಜಿಲ್ಲೆಯ ಗದಗ, ನರಗುಂದ, ರೋಣ ತಾಲೂಕಿನ 90 ಗ್ರಾಮಗಳನ್ನು ಒಳಗೊಂಡಿರುವ ನರಗುಂದ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಎರಡೂವರೆ ದಶಕಗಳಿಂದ ಕೈ-ಕಮಲದ ನಡುವಿನ ಪೈಪೋಟಿ ಮುಂದುವರಿದುಕೊಂಡು ಬಂದಿದೆ. ಆದರೆ ಕ್ಷೇತ್ರದ ಮರುವಿಂಗಡಣೆಯಾದ ನಂತರ ನಡೆದ ಮೂರು ಲೋಕಸಭಾ ಚುನಾವಣೆಯಲ್ಲಿ ನರಗುಂದ ವಿಧಾನಸಭಾ ಕ್ಷೇತ್ರದ ಮತದಾರರು ಬಿಜೆಪಿ ಅಭ್ಯರ್ಥಿಗೇ ಲೀಡ್‌ ಕೊಟ್ಟಿರುವುದು ವಿಶೇಷ. ಮತ್ತು ಬಿಜೆಪಿ ಅಭ್ಯರ್ಥಿಯೇ ಗೆಲುವು ಸಾಧಿಸಿರುವುದು
ಗಮನಾರ್ಹ ಸಂಗತಿ.

ಪ್ರಸ್ತುತ ನರಗುಂದ ವಿಧಾನಸಭಾ ಕ್ಷೇತ್ರದಲ್ಲಿ ಈ ಹಿಂದಿನ ಬಿಜೆಪಿ ಸರಕಾರದಲ್ಲಿ ಲೋಕೋಪಯೋಗಿ ಸಚಿವರಾಗಿದ್ದ ಸಿ.ಸಿ. ಪಾಟೀಲರು ಹಾಲಿ ಶಾಸಕರಾಗಿದ್ದಾರೆ. 2018ರ ವಿಧಾನಸಭಾ ಚುನಾವಣೆಯಲ್ಲಿ 7,979 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದ ಸಿ.ಸಿ. ಪಾಟೀಲರು ಕಳೆದ 2023ರ ವಿಧಾನಸಭಾ ಚುನಾವಣೆಯಲ್ಲಿ ಕೂದಲೆಳೆ ಅಂತರದಿಂದ (ಕೇವಲ 1,791 ಮತಗಳ) ಗೆಲುವು ಸಾಧಿಸಿದ್ದರು. 2008ರಲ್ಲಿ ಕ್ಷೇತ್ರ ಮರುವಿಂಗಡಣೆಯಾದ ನಂತರ ನರಗುಂದ ವಿಧಾನಸಭಾ ಕ್ಷೇತ್ರ ಬಾಗಲಕೋಟೆ
ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಸೇರ್ಪಡೆಯಾಯಿತು.

ತದ ನಂತರ ನಡೆದ ಮೂರು ಲೋಕಸಭಾ ಕ್ಷೇತ್ರದಲ್ಲಿ ನರಗುಂದ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯೇ ಲೀಡ್‌ ಪಡೆದಿದ್ದಾರೆ.ಬಿಜೆಪಿ ಅಭ್ಯರ್ಥಿ ಮತಗಳ ಅಂತರ ಹೆಚ್ಚಿಸಿಕೊಳ್ಳುತ್ತ ಸಾಗಿರುವುದು ಗಮನಾರ್ಹ ಸಂಗತಿ. 2009ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ 48,815, ಕಾಂಗ್ರೆಸ್‌ ಅಭ್ಯರ್ಥಿ 38,264 ಮತಗಳನ್ನು ಪಡೆದಿದ್ದರು. ಬಿಜೆಪಿ ಅಭ್ಯರ್ಥಿ 10,551 ಮತಗಳ ಅಂತರ ಪಡೆದಿದ್ದರು. 2014ರ ಲೋಕಸಭಾ ಚುನಾವಣೆಯಲ್ಲೂ ಕೂಡ ಬಿಜೆಪಿ ಅಭ್ಯರ್ಥಿ 64,249 ಮತಗಳನ್ನು ಪಡೆದರೆ, ಕಾಂಗ್ರೆಸ್‌ ಅಭ್ಯರ್ಥಿ 51,567 ಮತಗಳನ್ನು ಪಡೆದಿದ್ದರು. ಮತಗಳ ಅಂತರ 12,682 ಆಗಿತ್ತು. 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ 73,118 ಮತಗಳನ್ನು ಪಡೆದರೆ, ಕಾಂಗ್ರೆಸ್‌ ಅಭ್ಯರ್ಥಿ 54,805 ಮತಗಳನ್ನು ಪಡೆದಿದ್ದರು. ಮತಗಳ ಅಂತರ 18,313ಕ್ಕೆ ಏರಿಕೆ ಆಗಿತ್ತು.

Advertisement

ಲೋಕಸಭಾ ಚುನಾವಣೆ ಲೆಕ್ಕಾಚಾರ ಏನು?: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ಪ ರ್ಧಿಸಿದ್ದ 14 ಪಕ್ಷಗಳ ಅಭ್ಯರ್ಥಿಗಳ ಪೈಕಿ ಬಿಜೆಪಿ 72,835 (ಶೇ. 48.48) ಮತಗಳನ್ನು ಪಡೆದರೆ, ಕಾಂಗ್ರೆಸ್‌ 71,044 (ಶೇ. 47.29) ಮತಗಳನ್ನು ಪಡೆದಿತ್ತು. ಈ ಬಾರಿ ಕಾಂಗ್ರೆಸ್‌ನ ಗ್ಯಾರಂಟಿ ಲಾಭ ಪಡೆದ ಮಹಿಳೆಯರು ಕಾಂಗ್ರೆಸ್‌ಗೆ ಅಧಿಕ ಮತಗಳನ್ನು ಚಲಾಯಿಸಲಿದ್ದಾರೆ ಎಂದು ಕಾಂಗ್ರೆಸ್‌ ಲೆಕ್ಕಾಚಾರ ಹಾಕಿ ಕುಳಿತಿದ್ದರೆ, ಪ್ರಧಾನಿ ನೇಂದ್ರ ಮೋದಿ ಅವರ ಭ್ರಷ್ಟಾಚಾರ ರಹಿತ ಆಡಳಿತ, ಮೋದಿ ಹವಾ ಕಳೆದ ಮೂರು ಲೋಕಸಭಾ ಚುನಾವಣೆಗಿಂತಲೂ ಅಧಿಕ ಅಂತರದ ಮತಗಳು ಬಿಜೆಪಿ ಅಭ್ಯರ್ಥಿಗೆ ಬೀಳಲಿವೆ ಎಂಬ ಲೆಕ್ಕಾಚಾರ ಬಿಜೆಪಿ
ಪಾಳಯದಲ್ಲಿದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಬಿ.ಆರ್‌. ಯಾವಗಲ್‌ ಅವರು ಅಲ್ಪಮತಗಳ ಅಂತರದಿಂದ ಸೋಲನುಭವಿಸಿದ್ದರು. ಆ ಸೋಲಿನ ಕಹಿ ಅನುಭವ ಮರೆಯಲು ಮತದಾರರು ಕಾಂಗ್ರೆಸ್‌ಗೆ ಅಧಿಕ ಮತಗಳನ್ನು ಹಾಕಬೇಕೆಂದು ನಿರ್ಧರಿಸಿ ಮತ ಚಲಾಯಿಸಿದ್ದಾರೆ. ಅಲ್ಲದೇ ಕಾಂಗ್ರೆಸ್‌ ಸರಕಾರದ ಗ್ಯಾರಂಟಿ ಯೋಜನೆಗಳು ಸಂಪೂರ್ಣ ಅನುಷ್ಠಾನಗೊಂಡಿದ್ದು, ಮತದಾರರು ಕಾಂಗ್ರೆಸ್‌ ಮೇಲೆ ನಂಬಿಕೆ ಇಟ್ಟಿದ್ದಾರೆ.
*ಪ್ರವೀಣ ಯಾವಗಲ್‌, ಅಧ್ಯಕ್ಷ, ನರಗುಂದ ಬ್ಲಾಕ್‌ ಕಾಂಗ್ರೆಸ್‌

ಬಾಗಲಕೋಟೆ ಲೋಕಸಭಾ ಕ್ಷೇತ್ರದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಕೇಂದ್ರ ಸರಕಾರದ ಯೋಜನೆಗಳನ್ನು ಜಾರಿಗೊಳಿಸುವಲ್ಲಿ ಸಂಸದ ಪಿ.ಸಿ. ಗದ್ದಿಗೌಡರ ಶ್ರಮ ವಹಿಸಿದ್ದಾರೆ. ಸೌಮ್ಯ-ಶಾಂತ ಸ್ವಭಾವದ ಗದ್ದಿಗೌಡರ ಅವರು ಮತದಾರರ ಕಷ್ಟಗಳಲ್ಲಿ
ಭಾಗಿಯಾಗಿದ್ದಾರೆ. ನರೇಂದ್ರ ಮೋದಿ ಅವರ ಆಡಳಿತ, ಗದ್ದಿಗೌಡರ ಅವರ ವ್ಯಕ್ತಿತ್ವ ಬಿಜೆಪಿ ಗೆಲುವಿಗೆ ಕಾರಣವಾಗಲಿದೆ.
*ಅಜ್ಜನಗೌಡ ಪಾಟೀಲ, ಅಧ್ಯಕ್ಷ, ನರಗುಂದ ಬಿಜೆಪಿ ಮಂಡಲ

*ಅರುಣಕುಮಾರ ಹಿರೇಮಠ

Advertisement

Udayavani is now on Telegram. Click here to join our channel and stay updated with the latest news.

Next