Advertisement

LokSabha Election: ರಾಜ್ಯದಲ್ಲಿ 28 ಸ್ಥಾನದಲ್ಲೂ ಗೆಲುವು:ಮಾಜಿ ಸಿ.ಎಂ. ಡಿ.ವಿ.ಸದಾನಂದ ಗೌಡ

03:49 PM Nov 03, 2023 | Team Udayavani |

ಸುಬ್ರಹ್ಮಣ್ಯ: ಕಳೆದ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಎನ್.ಡಿ.ಎ. 25 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಇದೀಗ ಜೆಡಿಎಸ್ ಕೂಡ ಎನ್.ಡಿ.ಎ. ಜೊತೆಯಿದ್ದು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 28ರಲ್ಲಿ 28 ಸ್ಥಾನಗಳನ್ನು ಎನ್.ಡಿ.ಎ. ಗೆದ್ದುಕೊಳ್ಳುವ ಮೂಲಕ ವಿಧಾನಸಭಾ ಚುನಾವಣೆಯಲ್ಲಿ ಕಳೆದುಕೊಂಡದನ್ನು ಬಡ್ಡಿ ಸಮೇತ ಪಡೆದುಕೊಳ್ಳಲಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಡಿ.ವಿ. ಸದಾನಂದ ಗೌಡ ಹೇಳಿದರು.

Advertisement

ಅವರು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಕರ್ನಾಟಕದ ವಿಧಾನ ಸಭಾ ಚುನಾವಣೆಯಲ್ಲಿ ಅನೀರಿಕ್ಷಿತ ಹಿನ್ನಡೆಯಾಗಿದೆ. ಆದರೆ ಲೋಕಸಭಾ ಚುನಾವಣೆಯಲ್ಲಿ ಹಿನ್ನಡೆ ಅಸಾಧ್ಯ. ಲೋಕಸಭಾ ಚುನಾವಣೆ ರಾಷ್ಟ್ರೀಯ ವಿಚಾರದಲ್ಲಿ ನಡೆಯುವ ಚುನಾವಣೆ. ನರೇಂದ್ರ ಮೋದಿ ನೇತೃತ್ವದ  ಒಂಬತ್ತುವರೆ ವರ್ಷದ ಆಡಳಿತ ಅತ್ಯಂತ ಯಶಸ್ವಿಯಾಗಿದೆ. ಅವರಿಂದಾಗಿ ದೇಶದ ಅಭಿವೃದ್ಧಿಗೆ ಅರ್ಥ ಬಂದಿದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next