Advertisement

Loksabha; ನಾನು, ಮಗ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ: ಪ್ರಕಾಶ್ ಹುಕ್ಕೇರಿ ಸ್ಪಷ್ಟನೆ

01:20 PM Mar 11, 2024 | Team Udayavani |

ಬೆಳಗಾವಿ: ನಾನು ಮತ್ತು ನನ್ನ ಮಗ ಯಾವುದೇ ಕಾರಣಕ್ಕೂ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುವದಿಲ್ಲ ಎಂದು ವಿಧಾನಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.

Advertisement

ಬೆಳಗಾವಿಯಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ನಾನು ಸ್ಪರ್ಧೆ ಮಾಡುವಂತೆ ಒತ್ತಡಗಳು ಬರುತ್ತಿವೆ. ನಾನು ಸ್ಪರ್ಧೆ ಮಾಡಿದರೆ ಚಿಕ್ಕೋಡಿ ಲೋಕಸಭೆಯಲ್ಲಿ ಗೆಲ್ಲುತ್ತೇವೆ ಎಂಬ ಲೆಕ್ಕಾಚಾರವಿದೆ. ಆದರೆ ನಾನು ಯಾವುದೇ ಕಾರಣಕ್ಕೂ ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ನನಗೆ ಈಗ 75 ವಯಸ್ಸು, ಮೇಲಾಗಿ ನನ್ನ ಪರಿಷತ್ ಅಧಿಕಾರಾವಧಿ ಇನ್ನೂ 4 ವರ್ಷವಿದೆ. ನನ್ನನ್ನು ನಂಬಿ ಬೆಳಗಾವಿ, ವಿಜಯಪುರ, ಬಾಗಲಕೋಟೆ ಶಿಕ್ಷಕರು ಮತ ಹಾಕಿ ಗೆಲ್ಲಿಸಿದ್ದಾರೆ. ನನಗೆ ಮತಕೊಟ್ಟ ಶಿಕ್ಷಕರಿಗೆ ಮೋಸ ಮಾಡುವುದಿಲ್ಲ ಎಂದರು.

2014 ರಲ್ಲಿ ಆಗ ಸಿಎಂ ಆಗಿದ್ದ ಸಿದ್ದರಾಮಯ್ಯರ ಸೂಚನೆಯಂತೆ ಮಂತ್ರಿ ಇದ್ದರೂ ಸ್ಪರ್ಧಿಸಿ ಗೆದ್ದಿದ್ದೆ. ಆಗ ಪುತ್ರ ಗಣೇಶ ಹುಕ್ಕೇರಿ ಶಾಸಕ ಮಾಡಿ ಮಂತ್ರಿ ಮಾಡುತ್ತೇವೆ ಎಂದು ವರಿಷ್ಠರು ಭರವಸೆ ಕೊಟ್ಟಿದ್ದರು. ಆದರೆ ಮಂತ್ರಿ ಮಾಡಲಿಲ್ಲ. 2023 ರಲ್ಲಿ ಶಾಸಕ ಗಣೇಶ 78 ಸಾವಿರ ಅಂತರದಿಂದ ಗೆದ್ದರೂ ಮಂತ್ರಿ ಮಾಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈಗಾಗಲೇ ಬೆಳಗಾವಿಗೆ ಲಿಂಗಾಯತ, ಚಿಕ್ಕೋಡಿಗೆ ಕುರುಬ ಸಮುದಾಯಕ್ಕೆ ಟಿಕೆಟ್ ಎಂದು ಚರ್ಚೆಯಾಗಿದೆ. ಚಿಕ್ಕೋಡಿಗೆ ಕುರುಬ ಸಮಾಜಕ್ಕೆ ಟಿಕೆಟ್ ಕೊಟ್ಟರೆ ಗೆಲ್ಲಿಸಿಕೊಂಡು ಬರುತ್ತೇವೆ. ಚಿಕ್ಕೋಡಿ ಕ್ಷೇತ್ರದಲ್ಲಿ ಮೂರು ಲಕ್ಷ ಕುರುಬ ಸಮುದಾಯದರಿದ್ದಾರೆ. ಈ ಸಮುದಾಯದ ಮುಖಂಡ ಲಕ್ಷ್ಮಣರಾವ್‌ ಚಿಂಗಳೆಗೆ ಟಿಕೆಟ್ ಕೊಡುವಂತೆ ಒತ್ತಾಯಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next