ಹೊಸದಿಲ್ಲಿ/ ಬೆಂಗಳೂರು : ಲೋಕಸಭಾ ಚುನಾವಣೆಯ ಮತ ಎಣಿಕೆ ಮಂಗಳವಾರ ನಡೆಯುತ್ತಿದ್ದು ನಿರೀಕ್ಷೆಯಂತೆ ಪ್ರಧಾನಿ ನರೇಂದ್ರ ಮೋದಿ ಅವರು ವಾರಾಣಸಿ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ.
ರಾಜ್ಯದಲ್ಲಿ 11 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ನಾಲ್ಕು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಆರಂಭಿಕ ಮುನ್ನಡೆ ಸಾಧಿಸಿದೆ. ಹಾಸನದಲ್ಲಿ ಮತ ಎಣಿಕೆ ಸ್ವಲ್ಪ ವಿಳಂಬವಾಗಿದೆ ಎಂದು ವರದಿಯಾಗಿದೆ.
ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ, ಸಂಸದ ಡಿ.ಕೆ.ಸುರೇಶ್ ಅವರು ಮೈತ್ರಿ ಅಭ್ಯರ್ಥಿ ಡಾ.ಸಿ.ಎನ್. ಮಂಜುನಾಥ್ ವಿರುದ್ಧ ಮುನ್ನಡೆ ಸಾಧಿಸಿದ್ದಾರೆ. ಶಿವಮೊಗ್ಗದಲ್ಲಿ ಬಿ.ವೈ. ರಾಘವೇಂದ್ರ ಮುನ್ನಡೆ ಸಾಧಿಸಿದ್ದಾರೆ. ದಾವಣಗೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಮುನ್ನಡೆ ಸಾಧಿಸಿದ್ದಾರೆ.
ಕೇರಳದ ತಿರುವನಂತಪುರಂ ಲೋಕಸಭಾ ಕ್ಷೇತ್ರದ ಮೇಲೆ ಎಲ್ಲರ ಕಣ್ಣುಗಳು ಕೇಂದ್ರೀಕೃತವಾಗಿದ್ದು, ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಕೇಂದ್ರ ಸಚಿವ ಮತ್ತು ಬಿಜೆಪಿ ನಾಯಕ ರಾಜೀವ್ ಚಂದ್ರಶೇಖರ್ ವಿರುದ್ಧ ಆರಂಭಿಕ ಮುನ್ನಡೆ ಸಾಧಿಸಿದ್ದಾರೆ.
ಕೊಯಮುತ್ತೂರು ಕ್ಷೇತ್ರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಆರಂಭಿಕ ಮುನ್ನಡೆ ಸಾಧಿಸಿದ್ದಾರೆ.