Advertisement

LS; ಗೆಲ್ಲುವ ಅವಕಾಶ ತೋರಿಸಿದರೆ ಹೆಬ್ಬಾಳಕರ್ ಪುತ್ರನಿಗೆ ಟಿಕೆಟ್: ಸತೀಶ್ ಜಾರಕಿಹೊಳಿ

04:34 PM Feb 24, 2024 | Team Udayavani |

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಇಬ್ಬರು ಹಾಗೂ ಚಿಕ್ಕೋಡಿ ಕ್ಷೇತ್ರಕ್ಕೆ ಮೂವರ ಹೆಸರನ್ನು ಅಂತಿಮಗೊಳಿಸಿ ಹೈಕಮಾಂಡಿಗೆ ಕಳುಹಿಸಲಾಗಿದೆ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿಇವ ಸತೀಶ ಜಾರಕಿಹೊಳಿ ಹೇಳಿದ್ದಾರೆ.

Advertisement

ಖಾನಾಪುರ ತಾಲೂಕಿನ ಕಣಕುಂಬಿ ಯಲ್ಲಿ ಶನಿವಾರ ಸುದ್ದಿಗಾರರ ಜೊತೆಗೆ ಮಾತನಾಡಿ ‘ಅಭ್ಯರ್ಥಿಗಳ ಆಯ್ಕೆ ಪಕ್ಷದ ವರಿಷ್ಢರಿಗೆ ಬಿಟ್ಟಿದ್ದು. ನಮ್ಮ ಕುಟುಂಬದ ಯಾವ ಸದಸ್ಯರೂ ಚುನಾವಣೆಗೆ ಸ್ಪರ್ಧೆ ಮಾಡುವದಿಲ್ಲ ಎಂದು ಪುನರುಚ್ಚರಿಸಿದರು.

ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರು ಬೆಳಗಾವಿ ಕ್ಷೇತ್ರದಲ್ಲಿ ಗೆಲ್ಲುವ ಅವಕಾಶ ತೋರಿಸಿದರೆ ಅವರ ಪುತ್ರನಿಗೆ ಟಿಕೆಟ್ ನೀಡಲಾಗುವುದು ಎಂದು ಹೇಳಿದರು.

ರಸ್ತೆ ದುರಸ್ತಿ ಕಾರ್ಯಕ್ಕೆ ಚಾಲನೆ.
ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ಖಾನಾಪುರ ತಾಲೂಕಿನ ಕಣಕುಂಬಿ ಬಳಿ ಬೆಳಗಾವಿ- ಚೋರ್ಲಾ -ಗೋವಾ ರಸ್ತೆ ದುರಸ್ತಿ ಕಾರ್ಯಕ್ಕೆ ಚಾಲನೆ ನೀಡಿದರು.

ಗೋವಾದಿಂದ ರಣಕುಂಡಿ ಕ್ರಾಸ್‌ ವರೆಗಿನ ಈ ರಸ್ತೆ 43.ಕಿ.ಮೀಟರ್‌ ಉದ್ದವಾಗಿದ್ದು, 58.90 ಕೋಟಿ ರೂಪಾಯಿ ವೆಚ್ಚದಲ್ಲಿ ಸುಧಾರಣೆ ಕಾರ್ಯ ಕೈಗೊಳ್ಳುತ್ತಿದ್ದು, 11 ತಿಂಗಳ ಅವಧಿಯಲ್ಲೇ ರಸ್ತೆ ದುರಸ್ತಿ ಕಾರ್ಯ ಮುಗಿಸುವ ಗುರಿ ಹೊಂದಲಾಗಿದೆ ಎಂದು ಹೇಳಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next