Advertisement

ಲೈಂಗಿಕ ಕಿರುಕುಳ ಆರೋಪಿ,ನ್ಯಾಯವಾದಿ ರಾಜೇಶ್ ಪತ್ತೆಗಾಗಿ ಲುಕ್ ಔಟ್ ನೋಟಿಸ್

11:31 AM Nov 09, 2021 | Team Udayavani |

ಮಂಗಳೂರು: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣದ ಆರೋಪಿ, ನಗರದ ನ್ಯಾಯವಾದಿ ಕೆ. ಎಸ್.ಎನ್. ರಾಜೇಶ್ ಪತ್ತೆಗಾಗಿ ಪೊಲೀಸರು ಲುಕ್ ಔಟ್ ನೋಟಿಸ್ ಹೊರಡಿಸಿದ್ದಾರೆ.

Advertisement

ರಾಜೇಶ್ ಪತ್ತೆಗಾಗಿ ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ತಂಡ ರಚಿಸಲಾಗಿದೆ. ಆರೋಪಿ ದೇಶ ಬಿಟ್ಟು ಹೋಗದಂತೆಯೂ ಎಚ್ಚರ ವಹಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ವಿದ್ಯಾರ್ಥಿನಿ ಅ.18 ರಂದು ಪೊಲೀಸರಿಗೆ ದೂರು ನೀಡಿದ್ದುಆರೋಪಿಯನ್ನು ಬಂಧಿಸುವುದು ಪೊಲೀಸರಿಂದ ಇದುವರೆಗೂ ಸಾಧ್ಯವಾಗಿಲ್ಲ.

ಮಂಗಳೂರಿನ ಲೋಕಾಯುಕ್ತ ವಿಭಾಗದ ವಿಶೇಷ ಸರಕಾರಿ ಅಭಿಯೋಜಕರಾಗಿದ್ದ ಕೆ.ಎಸ್.ಎನ್ ರಾಜೇಶ್ ವಿರುದ್ಧ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿದ್ಯಾರ್ಥಿನಿ ಕಳೆದ ಆ.8 ರಂದು ಕೆ.ಎಸ್.ಎನ್ ರಾಜೇಶ್ ಅವರ ಕರಂಗಲ್ಪಾಡಿಯ ಕಚೇರಿಯಲ್ಲಿ ತರಬೇತಿಗಾಗಿ ಸೇರಿದ್ದರು. ಆಗ ರಾಜೇಶ್ ಯುವತಿಯನ್ನು ಪುಸಲಾಯಿಸಿ ಲೈಂಗಿಕವಾಗಿ ಬಳಸಿಕೊಳ್ಳಲು ಒತ್ತಾಯಿಸುತ್ತಿದ್ದರು. ಸೆ.25 ರಂದು ಚೇಂಬರ್ ಒಳಗೆ ಕರೆದು ಅಸಭ್ಯವಾಗಿ ವರ್ತಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

Advertisement

ರಾಜೇಶ್ ಲೋಕಾಯುಕ್ತದಲ್ಲಿ ದಾಖಲಾಗುವ ಭ್ರಷ್ಟಾಚಾರ ಪ್ರಕರಣಗಳಲ್ಲಿ ವಿಶೇಷ ಸರಕಾರಿ ಅಭಿಯೋಜಕರಾಗಿ ಕಳೆದ ಕೆಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರು.

ರಾಜೇಶ್ ಮತ್ತು ವಿದ್ಯಾರ್ಥಿನಿ ಮಾತನಾಡಿದ್ದು ಎನ್ನಲಾದ ಫೋನ್ ಕರೆಯ ಆಡಿಯೋ ಹರಿದಾಡಿತ್ತು. ಆರೋಪಗಳನ್ನು ರಾಜೇಶ್ ನಿರಾಕರಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next