Advertisement
ಈ ಪ್ರಕರಣಕ್ಕೆ ಸಂಬಂಧಿಸಿ ಪ್ರಸ್ತುತ ಗುಜರಾತ್‌ನ ಸಬರಮತಿ ಜೈಲಿನಲ್ಲಿರುವ ಲಾರೆನ್ಸ್ ಬಿಷ್ಣೋಯ್ ಅವರನ್ನು ಪೊಲೀಸರು ಕಸ್ಟಡಿಗೆ ತೆಗೆದುಕೊಳ್ಳುವ ಸಾಧ್ಯತೆಯಿದೆ ಮತ್ತು ಈ ಪ್ರಕರಣದಲ್ಲಿ ಕಟ್ಟುನಿಟ್ಟಾದ ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (ಎಂಸಿಒಸಿಎ) ಯನ್ನು ಜಾರಿಗೊಳಿಸುವ ಬಗ್ಗೆಯೂ ಚಿಂತನೆ ನಡೆಸುತ್ತಿದ್ದಾರೆ ಎಂದು ಅವರು ಹೇಳಿದರು.
Related Articles
Advertisement
ಏಪ್ರಿಲ್ 14 ರ ಮುಂಜಾನೆ ಸಲ್ಮಾನ್ ಖಾನ್ ಅವರ ಬಾಂದ್ರಾದಲ್ಲಿನ ಗ್ಯಾಲಕ್ಸಿ ಅಪಾರ್ಟ್‌ಮೆಂಟ್ ಬಳಿ ಬೈಕ್‌ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಗುಂಡು ಹಾರಿಸಿದ ಹಿನ್ನೆಲೆಯಲ್ಲಿ ಪೊಲೀಸರು ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 307 (ಕೊಲೆಗೆ ಯತ್ನ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ಬಿಹಾರದ ನಿವಾಸಿಗಳಾದ ವಿಕ್ಕಿ ಗುಪ್ತಾ (24) ಮತ್ತು ಸಾಗರ್ ಪಾಲ್ (21) ಸೋನು ಕುಮಾರ್ ಸುಭಾಷ್ ಚಂದರ್ ಬಿಷ್ಣೋಯ್ (37) ಮತ್ತು ಅನುಜ್ ಥಾಪನ್ (32) ಸೇರಿ ನಾಲ್ವರನ್ನು ಈಗಾಗಲೇ ಬಂಧಿಸಲಾಗಿದೆ.
ಇದನ್ನೂ ಓದಿ: Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ