ಬೆಂಗಳೂರು: ಪ್ರೇಯಸಿಯನ್ನು ಹತ್ಯೆಗೈದು ನಾಪತ್ತೆಯಾಗಿರುವ ದೆಹಲಿ ಮೂಲದ ಆರೋಪಿ ಅರ್ಪಿತ್ ಪತ್ತೆಗಾಗಿ ಜೀವನ್ ಭೀಮಾನಗರ ಪೊಲೀಸರು ಲುಕ್‌ಔಟ್ ನೋಟಿಸ್ ಜಾರಿ ಮಾಡಿದ್ದಾರೆ. ಕ್ಷಾ
ಆರೋಪಿ ಜೂ. 5ರಂದು ಆರೋಪಿ ಅರ್ಪಿತ್(31), ಪ್ರೇಯಸಿ, ಹೈದರಾಬಾದ್ ಮೂಲದ ಆಕಾಂಕ್ಷಾ (23) ಎಂಬಾಕೆಯನ್ನ ಉಸಿರುಗಟ್ಟಿಸಿ ಕೊಂದು ಪರಾರಿಯಾಗಿದ್ದ. ಇದುವರೆಗೂ ಆರೋಪಿ ಪತ್ತೆಯಾಗಿಲ್ಲ. ಹೀಗಾಗಿ ತನಿಖೆ ಚುರುಕುಗೊಳಿಸಿರುವ ಪೊಲೀಸರು ಆರೋಪಿ ದೇಶ ಬಿಟ್ಟು ತೆರಳದಂತೆ ಲುಕ್ ಔಟ್ ನೋಟಸ್ ಜಾರಿ ಮಾಡಿದ್ದಾರೆ.
ಆರೋಪಿ ಅರ್ಪಿತ್ ಎಂಬಿಎ ವ್ಯಾಸಂಗ ಮಾಡಿದ್ದು, ಆಕಾಂಕ್ಷಾ ಬಿ.ಕಾಂ. ಪದವೀಧರೆ. 2 ವರ್ಷಗಳ ಹಿಂದೆ ಇಬ್ಬರು ಬೆಂಗಳೂರಿಗೆ ಬಂದಿದ್ದು, ಮಾರ್ಕೆಟಿಂಗ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಪರಿಚಯವಾಗಿದ್ದು, ಕೆಲ ದಿನಗಳ ಬಳಿಕ ಪ್ರೇಮಾಂಕುರವಾಗಿದೆ. ಆ ಬಳಿಕ ಇಬ್ಬರು ಒಂದೇ ಮನೆಯಲ್ಲಿ ಸಹಜೀವನ ನಡೆಸುತ್ತಿ ದ್ದರು. ಇತ್ತೀಚೆಗೆ ಅರ್ಪಿತ್‌ಗೆ ಹೈದರಾಬಾದ್‌ನಲ್ಲಿ ಕೆಲಸ ಸಿಕ್ಕಿದ್ದು, ಅಲ್ಲಿಯೇ ವಾಸವಾಗಿದ್ದಾನೆ. ಇನ್ನು ಆಕಾಂಕ್ಷಾ ಕೋಡಿಹಳ್ಳಿಯ 6ನೇ ಕ್ರಾಸ್‌ನಲ್ಲಿರುವ ಅಪಾರ್ಪ್ ಮೆಂಟ್‌ನಲ್ಲಿ ಸ್ನೇಹಿತೆ ಜತೆ ವಾಸವಾಗಿದ್ದರು.
ಕೊಂದು, ಆತ್ಮಹತ್ಯೆ ಕಥೆ ಕಟ್ಟಲು ಯತ್ನ: ಹೈದರಾಬಾದ್‌ನಲ್ಲಿದ್ದ ಅರ್ಪಿತ್ ಜೂ. 4ರಂದೆ ಬೆಂಗಳೂರಿಗೆ ಬಂದಿದ್ದು, ಪ್ರೇಯಸಿ ಮನೆಯ ಲ್ಲಿಯೇ ವಾಸವಾಗಿದ್ದ. ಜೂನ್ 6ರಂದು ಇಬ್ಬರು ಒಟ್ಟಿಗೆ ಹೊರಗಡೆ ಸುತ್ತಾಡಿ, ಮಧ್ಯಾಹ್ನ ಮನೆಗೆ ಬಂದಿದ್ದಾರೆ. ಆ ಸಂದರ್ಭದಲ್ಲಿ ಇಬ್ಬರ ನಡುವೆ ವೈಯಕ್ತಿಕ ವಿಚಾರಗಳಿಗೆ ಜಗಳ ನಡೆದಿರುವ ಸಾಧ್ಯತೆಯಿದೆ. ಅದರಿಂದ ಆಕ್ರೋಶಗೊಂಡ ಆರೋಪಿ ಆಕಾಂಕ್ಷಾಳ ಉಸಿರುಗಟ್ಟಿಸಿ ಕೊಲೆಗೈದಿದ್ದಾನೆ. ಬಳಿಕ ಅದನ್ನು ಆತ್ಮಹತ್ಯೆ ಎಂದು ಬಿಂಬಿಸಲು, ಆಕೆಯ ವೇಲ್ ನಿಂದಲೇ ಕುತ್ತಿಗೆ ಬಿಗಿದು ನೇಣು ಬಿಗಿದುಕೊಂಡಿರುವ ರೀತಿಯಲ್ಲಿ ಬಿಂಬಿಸಲು ಯತ್ನಿಸಿದ್ದಾನೆ. ಸಾಧ್ಯವಾಗದೆ, ನೆಲದ ಮೇಲೆಯೇ ಮೃತದೇಹ ಇಟ್ಟು ಪರಾರಿಯಾಗಿ ದ್ದಾನೆ. ಸಂಜೆ 7 ಗಂಟೆ ಸುಮಾರಿಗೆ ಆಕಾಂಕ್ಷಾಳ ಸ್ನೇಹಿತೆ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ.
ಕೂಡಲೇ ಆಕೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಜೆ.ಬಿ.ನಗರ ಠಾಣೆ ಪೊಲೀಸರಿಗೆ, ಘಟನಾ ಸ್ಥಳ ಪರಿಶೀನೆ ಮತ್ತು ಪ್ರಾಥಮಿಕ ತನಿಖೆಯಿಂದ ಕೊಲೆ ಎಂಬುದು ಗೊತ್ತಾಗಿದೆ. ಆರೋಪಿ ಮೊಬೈಲ್, ಇತರೆ ಸುಳಿವುಗಳನ್ನು ಇಲ್ಲಿಯೇ ಬಿಟ್ಟು ಹೋಗಿದ್ದರಿಂದ ಆರೋಪಿ ಪತ್ತೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಆತ ದೇಶ ಬಿಟ್ಟು ಹೋಗದಂತೆ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.