ಗುಬ್ಬಿ: ಲಾರಿಗಳ ನಡುವೆ ಭೀಕರ ಅಪಘಾತ ಸಂಭವಿಸಿ ಓರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಪಟ್ಟಣದ ಹೊರವಲಯದ ಸಿಂಗೋನಹಳ್ಳಿ ಬ್ರಿಡ್ಜ್ ಬಳಿ ಬುಧವಾರ (ಮಾ.25 ರಂದು) ಬೆಳಿಗ್ಗೆ ನಡೆದಿದೆ.
Advertisement
ಘಟನೆಯಲ್ಲಿ ಓರ್ವ ಸ್ಥಳದಲ್ಲೇ ಮೃತಪಟ್ಟು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೋಳಿಗಳನ್ನು ತುಂಬಿಕೊಂಡು ವೇಗವಾಗಿ ಹೋಗುತ್ತಿದ್ದ ಲಾರಿಯು ಇನ್ನೊಂದು ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.