Advertisement

ಲಾರಿ-ಆಟೋರಿಕ್ಷಾ ಢಿಕ್ಕಿ: ಬಾಲಕ ಸಾವು

12:33 AM Nov 30, 2021 | Team Udayavani |

ಉಪ್ಪಿನಂಗಡಿ: ಸೋಮವಾರ ರಾಷ್ಟ್ರೀಯ ಹೆದ್ದಾರಿ 75ರ ಮಠ ಎನ್ನುವಲ್ಲಿ ಲಾರಿಯೊಂದು ಆಟೋ ರಿಕ್ಷಾಕ್ಕೆ ಢಿಕ್ಕಿ ಹೊಡೆದ ಪರಿಣಾಮ ಆಟೋ ರಿಕ್ಷಾದಲ್ಲಿದ್ದ ಬಾಲಕ ಮೃತಪಟ್ಟು, ರಿಕ್ಷಾ ಚಾಲಕ ಸಹಿತ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

Advertisement

ಹಿರ್ತಡ್ಕ ನಿವಾಸಿ ದಿ| ಅಶ್ರಫ್ ಅವರ ಪುತ್ರ, ಹಿರ್ತಡ್ಕ ಸರಕಾರಿ ಪ್ರಾಥಮಿಕ ಶಾಲೆಯ 6ನೇ ತರಗತಿ ವಿದ್ಯಾರ್ಥಿ ಟಿ. ಮೊಹಮ್ಮದ್‌ ಅಲ್ತಾಫ್ (12) ಮೃತ ಬಾಲಕ. ರಿಕ್ಷಾದಲ್ಲಿದ್ದ ಆತನ ತಾಯಿ ಖತೀಜಮ್ಮ (46) ಅಣ್ಣ ಆಶಿಕ್‌ ಅಲಿಯಾಸ್‌ ಟಿ. ಮೊಹಮ್ಮದ್‌ ಅಸ್ರಾರ್‌ (23) ಮತ್ತು ಆಟೋ ರಿಕ್ಷಾ ಚಾಲಕ ಹಿರ್ತಡ್ಕ ನಿವಾಸಿ ಸಿದ್ದಿಕ್‌ (34) ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖ ಲಿಸಲಾಗಿದೆ. ಗಾಯಾಳುಗಳ ಪೈಕಿ ಖತಿಜಮ್ಮ ಹಾಗೂ ಆಶಿಕ್‌ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.

ಮೃತ ಅಲ್ತಾಫ್ನ ತಾಯಿ ಖತೀಜಮ್ಮ ಮಂಗಳೂರು ಬೆಂಗರೆ ನಿವಾಸಿ ಆಗಿದ್ದು, ಅವರು ತನ್ನ ಮಕ್ಕಳೊಂದಿಗೆ ತವರು ಮನೆಗೆ ಹೋಗಿದ್ದವರು ಬಸ್ಸಿನಲ್ಲಿ ಬಂದು ಉಪ್ಪಿನಂಗಡಿಯಲ್ಲಿ ಬಸ್‌ನಿಂದ ಇಳಿದು ಆಟೋರಿಕ್ಷಾದಲ್ಲಿ ಮನೆಗೆ ಹೋಗುತ್ತಿದ್ದ ವೇಳೆ ಈ ದುರ್ಘ‌ಟನೆ ಸಂಭವಿಸಿದೆ. ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಬರುತ್ತಿದ್ದ ಲಾರಿ ಇನ್ನೊಂದು ವಾಹನವನ್ನು ಹಿಂದಿಕ್ಕುವ ಯತ್ನದಲ್ಲಿ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದ್ದು, ಆಟೋ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದೆ.

ಇದನ್ನೂ ಓದಿ:ಎನ್‌ಸಿಸಿ ಮುಖಂಡ,ಸಚಿವ ನವಾಬ್‌ ಮಲಿಕ್‌ಗೆ ಜಾಮೀನು

ಘಟನ ಸ್ಥಳಕ್ಕೆ ಪುತ್ತೂರು ಡಿವೈಎಸ್ಪಿ ಗಾನಾ ಪಿ. ಕುಮಾರ್‌, ಸಂಚಾರಿ ಸಬ್‌ ಇನ್‌ಸ್ಪೆಕ್ಟರ್‌ ರಾಮ ನಾಯ್ಕ ಮತ್ತು ಸಿಬಂದಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಕುಟುಂಬವನ್ನು ಕಂಗೆಡಿಸಿದ ಅಪಘಾತ
ಮೂವರು ಗಂಡು ಮಕ್ಕಳನ್ನು ಹೊಂದಿದ್ದ ಅಶ್ರಫ್ ವಾಹನ ಚಾಲಕರಾಗಿ ಕಾರ್ಯನಿರ್ವಹಿಸಿದ್ದವರು ಕ್ಯಾನ್ಸರ್‌ ಕಾಯಿಲೆಗೆ ಸಿಲುಕಿ ಲಕ್ಷಾಂತರ ರೂಪಾಯಿ ವೆಚ್ಚ ಮಾಡಿದ ಬಳಿಕ 2 ವರ್ಷದ ಹಿಂದೆ ಸಾವನ್ನಪ್ಪಿದ್ದರು. ಖತಿಜಮ್ಮ ತನ್ನ ಮೂವರು ಮಕ್ಕಳೊಂದಿಗೆ ಸಂಬಂಧಿಕರ ಆಶ್ರಯದಲ್ಲಿ ಜೀವನ ನಡೆಸುತ್ತಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next