Advertisement

ಲಾರಿ-ಬೈಕ್‌ ಮುಖಾಮುಖಿ: ಬೈಕ್‌ ಸವಾರ ಸಾವು

01:34 AM Jun 11, 2019 | Lakshmi GovindaRaj |

ಬೆಂಗಳೂರು: ಲಾರಿ ಹಾಗೂ ಬೈಕ್‌ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್‌ ಸವಾರ ಮೃತಪಟ್ಟಿರುವ ಘಟನೆ ಕೆ.ಆರ್‌ ಪುರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ಮುಂಜಾನೆ ನಡೆದಿದೆ.ತಮಿಳುನಾಡು ಮೂಲದ ಪೂವರಸನ್‌ (22) ಮೃತರು.

Advertisement

ಸೋಮವಾರ ಮುಂಜಾನೆ 4 ಗಂಟೆ ಸುಮಾರಿಗೆ ಪೂವರಸನ್‌ ರಾಮಮೂರ್ತಿ ನಗರ ಮುಖ್ಯರಸ್ತೆಯ ಪಕ್ಕದ ಸರ್ವೀಸ್‌ ರಸ್ತೆಯಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಎದುರುಗಡೆಯಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಪೂವರಸನ್‌ ಕೆಳಗೆ ಬಿದ್ದು ತಲೆಗೆ ಗಂಭೀರವಾಗಿ ಗಾಯಗೊಂಡಿದೆ. ಅಪಘಾತ ಕಂಡ ವಾಹನ ಸವಾರರು ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫ‌ಲಿಸದೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದರು.

ಪೂವರಸನ್‌ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದು ನಾಗವಾರ ಪಾಳ್ಯದಲ್ಲಿ ನೆಲೆಸಿದ್ದರು. ಮೃತದೇಹದ ಮರಣೋತ್ತರ ಪರೀಕ್ಷೆ ಪೂರ್ಣಗೊಳಿಸಿ ಪೋಷಕರಿಗೆ ಪೊಲೀಸರು ಹಸ್ತಾಂತರಿಸಿದ್ದಾರೆ. ಘಟನೆ ಬಳಿಕ ಲಾರಿಯನ್ನು ಸ್ಥಳದಲ್ಲಿಯೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಆತನ ಬಂಧನಕ್ಕೆ ಕ್ರಮ ವಹಿಸಲಾಗಿದೆ.ಎಂದು ಕೆ.ಆರ್‌ ಪುರ ಸಂಚಾರ ಪೊಲೀಸರು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next