Advertisement

ಹೆದ್ದಾರಿ ಬದಿ ಕಸ ಎಸೆಯಲು ಯತ್ನ: ಲಾರಿ ಚಾಲಕನಿಗೆ ದಂಡ

02:25 AM Sep 01, 2018 | Karthik A |

ಕಾಪು: ಇಲ್ಲಿನ ಪುರಸಭಾ ವ್ಯಾಪ್ತಿಯ ಕೊಪ್ಪಲಂಗಡಿಯಲ್ಲಿ ರಸ್ತೆ ಬದಿ ತ್ಯಾಜ್ಯ ಎಸೆದು ಪರಾರಿಯಾಗಲೆತ್ನಿಸಿದ ಲಾರಿಯೊಂದನ್ನು ಪುರಸಭೆ ಮೂಲಕ ತಡೆ ಹಿಡಿದು, ಐದು ಸಾವಿರ ರೂ. ದಂಡ ವಿಧಿಸಿದ ಘಟನೆ ಗುರುವಾರ ಸಂಜೆ ಕಾಪುವಿನಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 66ರ ಕೊಪ್ಪಲಂಗಡಿ ಬಳಿ ನಿಪ್ಪಾಣಿ ಮೂಲದ ಲಾರಿಯನ್ನು ರಸ್ತೆ ಬದಿ ನಿಲ್ಲಿಸಿದ ಚಾಲಕ, ನಿರ್ವಾಹಕನ ಮೂಲಕವಾಗಿ ಲಾರಿಯಲ್ಲಿದ್ದ ಪ್ಲಾಸ್ಟಿಕ್‌ ಕಸ – ತ್ಯಾಜ್ಯವನ್ನು ಎಸೆಯಲು ಯತ್ನಿಸಿದ್ದನು. ಈ ವೇಳೆ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಉಚ್ಚಿಲ ಜಯ ಕರ್ನಾಟಕ ಘಟಕದ ಅಧ್ಯಕ್ಷ ಹರೀಶ್‌ ಶೆಟ್ಟಿ, ಕಾರ್ಯದರ್ಶಿ ಸತೀಶ್‌ ಶೆಟ್ಟಿ  ಮತ್ತು ಯಶೋಧರ ಶೆಟ್ಟಿ ಚಾಲಕನನ್ನು ಪ್ರಶ್ನಿಸಿ, ಈ ಬಗ್ಗೆ ಪುರಸಭೆ ಮುಖ್ಯಾಧಿಕಾರಿಗೆ ಮಾಹಿತಿ ರವಾನಿಸಿದ್ದರು.

Advertisement

ಲಾರಿಯಲ್ಲಿ ಕಸ ಎಸೆಯುವ ಸುದ್ದಿ ತಿಳಿಯುತ್ತಲೇ ಸ್ಥಳಕ್ಕೆ ಧಾವಿಸಿದ ಕಾರ್ಯನಿರ್ವಹಿಸುತ್ತಿರುವ ಪುರಸಭೆ ಮುಖ್ಯಾಧಿಕಾರಿ ರಾಯಪ್ಪ ಅವರು ತತ್‌ಕ್ಷಣ ಸ್ಥಳಕ್ಕೆ ಧಾವಿಸಿ, ಕಸ ಎಸೆಯುವುದನ್ನು ಪ್ರಶ್ನಿಸಿ ಲಾರಿ ವಶಕ್ಕೆ ಪಡೆದುಕೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ 66ರ ಬದಿಯಲ್ಲಿ ಮತ್ತು ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ಎಸೆದ ಕಾರಣಕ್ಕೆ ಪುರಸಭೆ ಲಾರಿ ಚಾಲಕನಿಗೆ 5,000 ರೂ. ದಂಡ ವಿಧಿಸಿದ್ದು, ಚಾಲಕನಿಗೆ ಎಚ್ಚರಿಕೆ ನೀಡಿ ಬಿಡುಗಡೆಗೊಳಿಸಲಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ರಾಯಪ್ಪ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next