ಕುಣಿಗಲ್ : ಚಲಿಸುತ್ತಿದ್ದ ಬೈಕ್ ಮೇಲೆ ಲಾರಿ ಉರುಳಿ ಬಿದ್ದು ಬೈಕ್ ಸವಾರನ್ನು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75 ನಾಗೇಗೌಡನಪಾಳ್ಯ ಗೇಟ್ ಬಳಿ ಸೋಮವಾರ ಸಂಜೆ ಸಂಬವಿಸಿದೆ.
ತಾಲೂಕಿನ ಹುಲಿಯೂರುದುರ್ಗ ಹೋಬಳಿ ಚಿಕ್ಕಮಾವತ್ತೂರು ಗ್ರಾಮದ ಸಂಜಯ್ (26) ಮೃತ ದುರ್ದೈವಿ. ಸಂಜಯ್, ಜಿಪಿ ಡಿಸ್ಟಲರಿ ಕಾರ್ಖಾನೆಯಲ್ಲಿ ಕಾರ್ಮಿಕನಾಗಿದ್ದು ಕೆಲಸದ ನಿಮಿತ್ತ ಬೈಕ್‌ನಲ್ಲಿ ಎಡಿಯೂರಿಗೆ ಹೋಗುತ್ತಿರಬೇಕಾದರೆ, ಬೆಂಗಳೂರಿನಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಸ್ಕಿಡ್ ಆಗಿ ಚಲಿಸುತ್ತಿದ್ದ ಬೈಕ್ ಮೇಲೆ ಉರುಳಿ ಬಿದ್ದ ಕಾರಣ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಅಮೃತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.