Advertisement

ಲಾರಿ ಹಿಂಬದಿ ಗುದ್ದಿದ ಗ್ಯಾಸ್ ಟ್ಯಾಂಕರ್: ಚಾಲಕ ದುರ್ಮರಣ

10:04 AM May 01, 2019 | Team Udayavani |

ಕಟಪಾಡಿ: ರಾಷ್ಟ್ರೀಯ ಹೆದ್ದಾರಿ 66 ರ ಕಟಪಾಡಿ ಜಂಕ್ಷನ್ ನಲ್ಲಿ ಗ್ಯಾಸ್ ಟ್ಯಾಂಕರೊಂದು ನಿಲ್ಲಿಸಿದ್ದ ಲಾರಿಗೆ ಡಿಕ್ಕಿ ಹೊಡೆದ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ.

Advertisement

ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಟ್ಯಾಂಕರ್ ಚಾಲಕ ನಂತರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.ಮೃತ ಚಾಲಕನನ್ನು ತಮಿಳುನಾಡು ಮೂಲದ ಸೆಲ್ವ ಕುಮಾರ್ (41) ಎಂದು ಗುರುತಿಸಲಾಗಿದೆ.

ಮಧ್ಯರಾತ್ರಿ ವೇಳೆ ನಡೆದ ಅಪಘಾತದ ರಭಸಕ್ಕೆ ಟ್ಯಾಂಕರ್ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಅದರ ಮಧ್ಯೆ ಸಿಲುಕಿ ಹಾಕಿಕೊಂಡಿದ್ದ ಚಾಲಕನನ್ನು ಹೊರತೆಗೆಯಲು ಪೊಲೀಸರು ಮತ್ತು ಸ್ಥಳೀಯರು ಹರ ಸಾಹಸ ಪಟ್ಟರು.


ತಡರಾತ್ರಿ ಈ ಘಟನೆ ಸಂಭವಿಸಿದ್ದು ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತು. ಕಾಪು ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು ,ಪೊಲೀಸರು ಮತ್ತು ಸ್ಥಳೀಯರು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Advertisement

Udayavani is now on Telegram. Click here to join our channel and stay updated with the latest news.

Next