Advertisement

Charmadi Ghat: ಬಂಡೆ ಕಲ್ಲಿಗೆ ಡಿಕ್ಕಿ ಹೊಡೆದ ಲಾರಿ; ಚಾಲಕ ಪ್ರಾಣಾಪಾಯದಿಂದ ಪಾರು

12:20 PM Jan 06, 2024 | Team Udayavani |

ಕೊಟ್ಟಿಗೆಹಾರ: ಲಾರಿಯೊಂದು ಬಂಡೆ ಕಲ್ಲಿಗೆ ಡಿಕ್ಕಿ ಹೊಡೆದ ಘಟನೆ ಚಾರ್ಮಾಡಿ ಘಾಟ್ ನಲ್ಲಿ ನಡೆದಿದ್ದು, ಚಾಲಕನಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ.

Advertisement

ಕೊಟ್ಟಿಗೆಹಾರ ಕರಾವಳಿ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕಿಸುವ ಚಾರ್ಮಾಡಿ ಘಾಟ್ ನ 6ನೇ ತಿರುವಿನಲ್ಲಿ ಗೊಬ್ಬರ ತುಂಬಿಸಿಕೊಂಡು ಚಿಕ್ಕಮಗಳೂರಿಯಿಂದ ಮಂಗಳೂರು ಕಡೆಗೆ ಸಾಗಿಸುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಚಾರ್ಮಾಡಿ ಘಾಟ್ ನ ಬಂಡೆ ಕಲ್ಲಿಗೆ ಡಿಕ್ಕಿ ಹೊಡೆದಿದೆ.

ಘಟನೆಯ ಪರಿಣಾಮ ಲಾರಿಯ ಮುಂಬಾಗ ಸಂಪೂರ್ಣ ನಜ್ಜುಗುಜ್ಜಾಗಿ  ಚಾಲಕನಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ.

ಚಾರ್ಮಾಡಿ ಘಾಟ್ ನಲ್ಲಿ ಎರಡು ದಿನದಿಂದ ತುಂತುರು ಮಳೆಯಾಗುತ್ತಿದ್ದು ಚಾಲಕನಿಗೆ ರಸ್ತೆ ಸರಿಯಾಗಿ ಕಾಣದೆ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next