ವಿಟ್ಲ: ಲಾರಿ, ಟಾಟಾ ಏಸ್ ವಾಹನ ಮತ್ತು ಬೈಕ್ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ಮಾಣಿ-ಮೈಸೂರು ರಾಜ್ಯ ಹೆದ್ದಾರಿ ಕೊಡಾಜೆಯಲ್ಲಿ ಸಂಭವಿಸಿದೆ.
ಪುತ್ತೂರು ಕಡೆಯಿಂದ ಬರುತ್ತಿದ್ದ ಲಾರಿ ಮಾಣಿಯಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಟಾಟಾ ಏಸ್ ವಾಹನಗಳು ಮುಖಾಮುಖಿ ಢಿಕ್ಕಿಯಾಗಿವೆ. ಟಾಟಾ ಏಸ್ ವಾಹನದ ಹಿಂದಿನಿಂದ ಬರುತ್ತಿದ್ದ ಬೈಕ್ ಹಿಂದಿನಿಂದ ಢಿಕ್ಕಿ ಹೊಡೆದು ಈ ಸರಣಿ ಅಪಘಾತ ಸಂಭವಿಸಿದೆ.
ಟಾಟಾ ವಾಹನ ಚಾಲಕ ಗಂಭೀರ ಗಾಯಗೊಂಡಿದ್ದು, ಬೈಕ್ ಸವಾರ ಕೂಡಾ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ:ಕೋವಿಡ್ ತಂದ ಸಂಕಷ್ಟ: ಭಾರತದ ವಿಮಾನಗಳಿಗೆ ಕೆನಡಾ, ಇಂಗ್ಲೆಂಡ್, ಯುಎಇ, ಆಸ್ಟ್ರೇಲಿಯಾ ನಿರ್ಬಂಧ
ಘಟನೆಯಿಂದ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ವಾಹನ ಸಂಚಾರ ನಿಯಂತ್ರಿಸಿದರು. ಘಟನೆಯಲ್ಲಿ ಏಸ್ ವಾಹನದ ಮುಂಭಾಗ ಜಖಂಗೊಂಡಿದೆ.
ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ಕೊಡಾಜೆ ಭಾಗವನ್ನು ಅಪಘಾತ ವಲಯ ಎಂದು ಪರಿಗಣಿಸಲಾಗಿತ್ತು. ಸ್ಥಳದಲ್ಲಿ ನಿರಂತರ ಅಪಘಾತ ಸಂಭವಿಸುತ್ತಲೇ ಇದೆ. ಇದು ಆತಂಕಕ್ಕೆ ಕಾರಣವಾಗಿದೆ.