Advertisement

ಬಂಟ್ವಾಳ: ಬೈಕ್ ಗೆ ಢಿಕ್ಕಿ ಹೊಡೆದ ಲಾರಿ: ಬೈಕ್ ಸವಾರ ಸಾವು ; ಲಾರಿ ಚಾಲಕ ಪರಾರಿ

01:40 PM Jul 07, 2021 | Team Udayavani |

ಬಂಟ್ವಾಳ: ಪಾಣೆಮಂಗಳೂರು ಸಮೀಪ ಲಾರಿಯೊಂದು ಬೈಕ್ ಗೆ ಢಿಕ್ಕಿ ಹೊಡೆದು ಪರಾರಿಯಾಗಿದ್ದು, ಘಟನೆಯಲ್ಲಿ ಬೈಕ್ ಸವಾರ ಬ್ಯಾಂಕ್ ಉದ್ಯೋಗಿಯೊಬ್ಬರು ಮೃತಪಟ್ಟ ಘಟನೆ ಬುಧವಾರ ನಡೆದಿದೆ.

Advertisement

ಮಂಚಿ ಗ್ರಾಮದ ಕಂಚಿಲ ನಿವಾಸಿ ಗಣೇಶ್ ನಾಯ್ಕ್(55) ಮೃತಪಟ್ಟ ವ್ಯಕ್ತಿ. ಅವರು ಮಂಗಳೂರಿನ ಬ್ಯಾಂಕೊಂದರಲ್ಲಿ ಉದ್ಯೋಗಿಯಾಗಿದ್ದು, ಬೆಳಗ್ಗೆ ಮನೆಯಿಂದ ಕಚೇರಿಗೆ ಹೋಗುವ ವೇಳೆ ಘಟನೆ ನಡೆದಿದೆ.

ಇದನ್ನೂ ಓದಿ: ಕಾವೂರು: ಮೀನು ಹಿಡಿಯುವ ವೇಳೆ ನೀರುಪಾಲಾದ ವ್ಯಕ್ತಿ:ಘಟನೆ ನೋಡಿ ಹೃದಯಾಘಾತದಿಂದ ವ್ಯಕ್ತಿ ಸಾವು

ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದ ಗಣೇಶ್ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಬಂಟ್ವಾಳ ಸಂಚಾರಿ ಪೊಲೀಸರು ಪ್ರಕರಣದ ಕುರಿತು ತನಿಖೆ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next